ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬದಿಂದ ಅಂಬ್ಲಿಗೊಳ ಹಾಗೂ ಅಂಜನಾಪುರ ಜಲಾಶಯಗಳಿಗೆ ಬಾಗಿನ ಸಮರ್ಪಣೆ

On: June 30, 2025 5:28 PM
Follow Us:
---Advertisement---

“ಶಿವಶರಣರ ನಾಡಿನ ಜೀವನಾಡಿ ಅಂಬ್ಲಿಗೋಳ – ಅಂಜನಾಪುರ ಜಲಾಶಯ ಭರ್ತಿ – ಅನ್ನದಾತನ ಮೊಗದಲ್ಲಿ ಮೂಡಿದ ಮಂದಹಾಸ”

 

ಸಾಗರ : ಶಿಕಾರಿಪುರ ತಾಲ್ಲೂಕಿನ ರೈತರ ಜೀವನಾಡಿ ತನ್ನ ಜೀವಕಳೆ ಮರಳಿ ಪಡೆದುಕೊಂಡು ಮೈದುಂಬಿ ಹರಿಯುತ್ತಿರುವ ಅಂಬ್ಲಿಗೋಳ ಹಾಗೂ ಅಂಜನಾಪುರ ಜಲಾಶಯಕ್ಕೆ ಇಂದು ಕುಟುಂಬ ಸಮೇತರಾಗಿ ಭೇಟಿ ಕೊಟ್ಟು ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರು, ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ರವರು ಜೊತೆಗೂಡಿ ಬಾಗಿನ ಸಮರ್ಪಣೆ ಮಾಡಿದರು.

20250630 175216ಜಲಾಶಯ ನೈಜ ಸೊಬಗನ್ನು ಮರಳಿ ಪಡೆದುಕೊಂಡಿದೆ – ಸಂಸದ ಬಿ ವೈ ರಾಘವೇಂದ್ರ

ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ವರ್ಷಧಾರೆ ಧುಮ್ಮಿಕ್ಕಿದ ಪರಿಣಾಮ ಜಲಾಶಯ ತನ್ನ ನೈಜ ಸೊಬಗನ್ನು ಮರಳಿ ಪಡೆದುಕೊಂಡು ಉಳುವ ಯೋಗಿಯ ಮೊಗದಲ್ಲಿ ಭಯದ ಕಾರ್ಮೋಡ ದೂರವಾಗಿ ಭರವಸೆಯ ಮಂದಹಾಸ ಮೂಡಿಸಿದ್ದು, ಈ ಸಾಲಿನಲ್ಲಿ ಉತ್ತಮ ಇಳುವರಿ ದೊರೆಯುವ ನಿರೀಕ್ಷೆ ಮೂಡಿದೆ.20250630 224711

ಬಿಎಸ್ ಯಡಿಯೂರಪ್ಪ ಅವರ ಕರ್ಮ ಭೂಮಿ ಸದಾ ಜಲ ಸಮೃದ್ಧಿ ಹಾಗೂ ಸಸ್ಯ ಸಮೃದ್ಧಿಯಿಂದ ಕಂಗೊಳಿಸುತ್ತಿರುತ್ತದೆ -ಬಿ ವೈ ವಿಜಯೇಂದ್ರ

ಸದಾ ರೈತರ ಬಗ್ಗೆ ನಾಡಿನ ಜಲ, ಸಸ್ಯ, ಧಾನ್ಯ ಸಮೃದ್ಧಿ ಗಳ ಬಗ್ಗೆ ಚಿಂತನೆ ಮಾಡುವ ಪೂಜ್ಯ ತಂದೆಯವರಾದ ಮಾನ್ಯ ಬಿಎಸ್ ಯಡಿಯೂರಪ್ಪ ಅವರ ಕರ್ಮ ಭೂಮಿ ಸದಾ ಜಲ ಸಮೃದ್ಧಿ ಹಾಗೂ ಸಸ್ಯ ಸಮೃದ್ಧಿಯಿಂದ ಕಂಗೊಳಿಸುತ್ತಿರುತ್ತದೆ ಎಂಬುವುದು ನಮ್ಮ ಶಿಕಾರಿಪುರದ ಹೆಮ್ಮೆ. ಭೂತಾಯಿ ಹಾಗೂ ವರುಣನ ಕೃಪೆಯಿಂದ ಕನ್ನಡ ನಾಡು ಸದಾ ಸಮೃದ್ಧಿ ಕೊಡಲಿ ಎಂದು ಆಶಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಶ್ರೀ ಹನುಮಂತಪ್ಪ ಅವರು, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ಅವರು ಸೇರಿದಂತೆ ಅನೇಕ ಮುಖಂಡರು, ಹಿರಿಯರು, ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment