ಸಾಗರ : ಭವ್ಯ ಭಾರತದ ಭವಿಷ್ಯದ ಪ್ರಜೆಗಳಾದ ನೀವು ಉತ್ತಮ ಜೀವನ ರೂಪಿಸಿಕೊಳ್ಳುವ ಗುರಿಯನ್ನು ಹೊಂದಿರಬೇಕು ಎಂದು ಪಿಎಸ್ಐ ಪ್ರವೀಣ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅವರು ಯಡೆಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ, 2025 – 26 ನೇ ಸಾಲಿನ ಶಾಲಾ ಸಂಸತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಾಗೂ ಮಕ್ಕಳ ರಕ್ಷಣಾ ಸಮಿತಿ ರಚನಾ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.
ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರ ಇರುವ ಮೂಲಕ ಓದಿನಲ್ಲಿ ಹೆಚ್ಚಿನ ಆಸಕ್ತಿ ಹೊಂದಿರಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ರೋಡ್ ಟ್ರಾಫಿಕ್, ಸೈಬರ್ ಕ್ರೈಂ ಬಾಲ್ಯ ವಿವಾಹ, ಪೋಕ್ಸ್ ಕಾಯಿದೆಗಳ ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು.
ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ವಿನಯ್ ಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ನೀಡಬೇಕು, ಉತ್ತಮವಾದ ಆಹಾರವನ್ನು ಸೇವಿಸಬೇಕು ಹಾಗೂ ಆರೋಗ್ಯಕರವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಯಡೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಸದಸ್ಯರಾದ ಚೇತನ ರಾಘವೇಂದ್ರ ಆನಂದಪುರ ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್, ಆರೋಗ್ಯ ಇಲಾಖೆಯ ಆಪ್ತ ಸಮಾಲೋಚಕರಾದ ಗೋಪಿ, ಪ್ರಾಂಶುಪಾಲರಾದ ಚಂದ್ರಶೇಖರ್ .ಬಿ ಇದ್ದರು.





