ಸಾಗರ : ನಾಡಿನ ಜನರು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ಜುಲೈ 14 ರಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಯಾಗುತ್ತಿದೆ.
ನೂತನ ಸೇತುವೆ ಉದ್ಘಾಟನೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಗುದ್ದಾಟಕ್ಕೂ ಕಾರಣವಾಗಿದೆ. ಇವೆಲ್ಲರ ನಡುವೆ ಈಗ ಶಾಸಕ ಗೋಪಾಲಕೃಷ್ಣ ಬೇಳೂರು ಬಿಎಸ್ ಯಡಿಯೂರಪ್ಪನವರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಶಾಸಕ ಗೋಪಾಲಕೃಷ್ಣ ಬೇಳೂರು ಬಿಎಸ್ ಯಡಿಯೂರಪ್ಪನವರಿಗೆ ಬರೆಯುವ ಪತ್ರದ ವಿಶೇಷತೆಗಳೇನು?
ಲಿಂಗನಮಕ್ಕಿ ಆಣೆಕಟ್ಟ ನಿರ್ಮಾಣದಿಂದಾಗಿ ಶರವತಿ ನದಿ ಹಿನ್ನಿರ ಪರಿಣಾಮ ಸಾಗರ ತಾಲ್ಲೂಕಿನ ತುಮರಿ, ಕುದರೂರು, ಶಂಕಣ್ಣ ಶ್ಯಾನುಭೋಗ್, ಚೆನ್ನಗೊಂಡ ಹಾಗೂ ಬಾನಕೋಳಿ ಹೀಗೆ ಒಟ್ಟು ಐದು ಗ್ರಾಮ ಪಂಚಾಯಿತಿಗಳ ಸುಮಾರು 20 ಸಾವಿರ ಜನರು ತಾಲೂಕು ಕೇಂದ್ರದಿಂದ ಸಂಪರ್ಕ ಕಳೆದುಕೊಂಡು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿರುವುದು ತಮಗೆ ತಿಳಿದ ವಿಷಯವಾಗಿದೆ. ಇದೇ ಭಾಗದಲ್ಲಿ ಬರುವ ಶ್ರೀ ಸಿಗಂದೂರು ಕ್ಷೇತ್ರ ಹಾಗೂ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಲಕ್ಷಾಂತರ ಜನರು ಭೇಟಿ ನೀಡುತ್ತಾ ಇರುತ್ತಾರೆ.
ಈ ಹಿನ್ನೆಲೆಯಲ್ಲಿ ಈ ಭಾಗದ ಜನರ ಸಮಸ್ಯೆಗಳನ್ನು ಅರಿತಿರುವ ತಾವುಗಳು ಸದರಿ ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ನಿರ್ಮಾಣಕ್ಕಾಗಿ ಈ ಸಾಲಿನ ಕರ್ನಾಟಕ ಸರ್ಕಾರದ ಬಜೆಟ್ ನಲ್ಲಿ 100 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದರು.
ಬೇಳೂರು ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ವರ್ಷದ ಕಾಮಗಾರಿಯಲ್ಲಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮಂಜುನಾಥ ಕಾಮಗಾರಿ ಕೈಗೊಳ್ಳುವುದಾಗಿ ಪತ್ರದಲ್ಲಿ ತಿಳಿಸಿದ್ದರು.