ಶಿವಮೊಗ್ಗ : ಬೆಳಗಾವಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಅಂಕೋಲಾದ ಅಗಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ.
ಖಾಸಗಿ ಬಸ್ ಕಿರು ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮವಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.
ಸೋಮವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದೆ.ಬಸ್ಸಿನಲ್ಲಿ ಸುಮಾರು 18 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಮಂಗಳೂರು ಹಾಗೂ ಕಾರವಾರ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಘಟನೆ ನಡೆದಿದೆ. ಅಂಕೋಲಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.