ಸಾಗರ : ನಿಂತಿರುವ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಶಿವಮೊಗ್ಗ ಸಮೀಪದ ಗಾಜನೂರು ಬಳಿ ನಿಂತಿರುವ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ನಡೆದಿದೆ.
ಈ ಅಪಘಾತದಿಂದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಚಳ್ಳಕೆರೆಯ ನಿವಾಸಿ ಹರ್ಷಿತ (35), ಬಸ್ ನಿರ್ವಾಹಕ ಅಣ್ಣಪ್ಪ (40)ಎಂಬವರು ಸಾವನ್ನಪ್ಪಿದ್ದಾರೆ.
ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಗಾಯಳುಗಳನ್ನ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.