ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಅಪ್ರಾಪ್ತ ವಯಸ್ಸಿನ ಯುವಕ ಯುವತಿಯರು ವಾಹನ ಚಲಾಯಿಸಿ ಅಪಘಾತವಾದರೆ ಪೋಷಕರು ಹೊಣೆ – ಪಿಎಸ್ಐ ಪ್ರವೀಣ್

On: August 1, 2025 2:16 PM
Follow Us:
---Advertisement---

ಸಾಗರ : ತಾಲ್ಲೂಕಿನ ತ್ಯಾಗರ್ತಿಯ ವಿವೇಕಾನಂದ ಪ್ರೌಢಶಾಲೆಯಲ್ಲಿ  ಆಯೋಜನೆ ಮಾಡಿದ್ದ ಬಾಲ್ಯ ವಿವಾಹ ತಡೆ, ಪೋಸ್ಕೋ ಕಾಯ್ದೆ ಮತ್ತು  ಕಾನೂನು ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಆನಂದಪುರದ ಪಿಎಸ್ಐ ಪ್ರವೀಣ್ ಎಸ್.ಪಿ ನೀಡಿದರು.

  ವಿದ್ಯಾರ್ಥಿಗಳು ಯಾವುದೇ ಹೊರಗಿನ ಆಕರ್ಷಣೆಗೆ ಒಳಗಾಗದೇ 18 ವರ್ಷ ತುಂಬುವ ವರೆಗೆ ಆಟ ಪಾಠ ಊಟದ ಕಡೆ ಹೆಚ್ಚಿನ ಗಮನಹರಿಸಬೇಕು ಹೇಳಿದರು.

 ಮಕ್ಕಳು ಶಾಲೆಗೆ ಬರುವಾಗ ಮತ್ತು ಮನೆಗೆ ತೆರಳುವಾಗ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಮಕ್ಕಳಿಗೆ ಯಾವುದೇ ವ್ಯಕ್ತಿ ಗಳಿಂದ ಶೋಷಣೆ ತೊಂದರೆ ಆದರೆ ತಕ್ಷಣ ಪೋಷಕರು ಅಥವಾ ಶಿಕ್ಷಕರ ಗಮನಕ್ಕೆ ತರಬೇಕು.ಲೈಸನ್ಸ್ ಇಲ್ಲದೆ ವಾಹನ ಚಲಾವಣೆ ಮಾಡುವುದು ಅಪರಾಧ ವಾಗುತ್ತದೆ. ಅಪ್ರಾಪ್ತ ವಯಸ್ಸಿನ ಯುವಕ ಯುವತಿಯರು ವಾಹನ ಚಾಲನೆ ಮಾಡಿ ಅಪಘಾತ ಸಂಭವಿಸಿದರೆ ಪೋಷಕರು ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.PSI PRAVEEN 1

ವಿದ್ಯಾರ್ಥಿಗಳು ಅಪರಾಧಗಳಿಂದ ದೂರ ಇರಬೇಕು ಪೋಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾದರೆ ಭವಿಷ್ಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ತೊಂದರೆ ಆಗುತ್ತದೆ ಎಂದು ಸಲಹೆ ನೀಡಿದರು.

 ಮಕ್ಕಳು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ದೂರ ಇರಬೇಕು. ಮೊಬೈಲ್ ಬಳಕೆ ಅನಿವಾರ್ಯತೆ ಇದ್ದಾಗ ಜಾಗ್ರತೆ ವಹಿಸಬೇಕು. ಇತ್ತೀಚೆಗೆ ಸೈಬರ್ ಕ್ರೈಂ ಜಾಸ್ತಿ ಆಗಿದ್ದು, ಇದರಲ್ಲಿ ಹಣ ಕಳೆದುಕೊಂಡರೆ ಮರಳಿ ಸಿಗುವುದಿಲ್ಲ ಇದರ ಬಗ್ಗೆ ಮಕ್ಕಳಿಗೆ ಅರಿವು ಇರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ನಿರ್ದೇಶಕ ಎಲ್. ಆರ್ ವೀರಪ್ಪ, ಮುಖ್ಯ ಶಿಕ್ಷಕ ತುಳಜ ನಾಯ್ಕ, ಶಿಕ್ಷಕ ಕಮಲಾಪತಿ ಇದ್ದರು.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment