ಹೊಸನಗರ : ತಾಲೂಕಿನ ಹೂವಿನ ಕೋಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳಿಂದ ಕೀಟನಾಶಕ ಮಿಶ್ರಣ ಮಾಡಿದ ಘಟನೆ ಇಡೀ ರಾಜ್ಯವನ್ನೇ ತಲ್ಲಣ ಗೊಳಿಸಿತ್ತು. ಆಗಬೇಕಾಗಿದ್ದ ದೊಡ್ಡ ಅನಾಹುತವನ್ನು ಸಿಬ್ಬಂದಿಯ ಸಮಯ ಪ್ರಜೆಯಿಂದ ತಪ್ಪಿದೆ.ಹೂವಿನ ಕೋಣೆ ಶಾಲೆಗೆ ಮಾಜಿ ಸಚಿವ ಹರತಾಳ ಹಾಲಪ್ಪ ಬೇಟಿ
ನೀರಿನ ಟ್ಯಾಂಕಿಗೆ ಕಿಡಿಗೇಡಿಗಳಿಂದ ಕೀಟನಾಶಕ ಮಿಶ್ರಣ ವಿಚಾರ ತಿಳಿದ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಘಟನೆಯನ್ನು ಖಂಡಿಸಿದ ಸಿಎಂ ಸಿದ್ದರಾಮಯ್ಯ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹೂವಿನ ಕೋಣೆ ಸರ್ಕಾರಿ ಪ್ರಾಥಮಿಕ ಶಾಲೆ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ.
ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತ ಒಂದು ತಪ್ಪಿದೆ. ಶಾಲೆ ಅಡಿಗೆ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ. ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ಕೃತ್ಯ ಎಸಗಿರುವ ದುರಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ.
ಕುಡಿಯುವ ನೀರಿಗೆ ವಿಷ ಬೆರಿಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆ ಅಧಃಪತನ ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇