ಸಾಗರ : ತಾಲ್ಲೂಕಿನ ಜಂಬೆಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಶಿವಮೊಗ್ಗದಿಂದ ಸಾಗರದ ಕಡೆ ಹೋಗುತ್ತಿದ್ದ ಕಾರು ಜಂಬೆಕೊಪ್ಪ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಾರು ಚಾಲಕ ಸಾಗರ ತಾಲ್ಲೂಕಿನ ತಾಳಗುಪ್ಪದ ನಿವಾಸಿ ಎಂದು ತಿಳಿದು ಬಂದಿದೆ. ಸಂಪೂರ್ಣ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.