ಸಾಗರ : ಪಠ್ಯದ ಜೊತೆಗೆ ಪಠ್ಯೇತರ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಆಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಲೀಮುಲ್ಲಾ ಖಾನ್ ಹೇಳಿದರು.
ಅವರು ಇಲ್ಲಿನ ಕ್ರಿಯೆಟೀವ್ ಇಂಟರ್‌ನ್ಯಾಷನಲ್ ಸ್ಕೂಲ್ ಇಲ್ಲಿನ ಕ್ರಿಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಆನಂದಪುರ ವಲಯ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಬರಿ ಪಾಠಕ್ಕೆ ಸೀಮಿತವಾಗಿರದೆ ಕ್ರೀಡೆ, ಸಾಂಸ್ಕೃತಿಕ ಮೊದಲಾದ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಈ ಬಗ್ಗೆ ಶಿಕ್ಷಕರು ವಿಶೇಷವಾದ ಗಮನವನ್ನು ಹರಿಸಬೇಕಾಗಿದೆ. ಬರಿ ಅಂಕಗಳಿಕೆಗೆ ಮಾತ್ರ ಮಕ್ಕಳನ್ನು ಸೀಮಿತವಾಗಿಸುವ ಕೆಲಸ ಆಗಬಾರದು. ಮಕ್ಕಳ ಮನಸನ್ನು ಉಲ್ಲಾಸವಾಗಿಡುವ ಕೆಲಸ ಆಗಬೇಕಾಗಿದೆ. ಇಂತಹ ಕ್ರೀಡಾಕೂಟಗಳ ಆಯೋಜನೆಯಿಂದ ಮಕ್ಕಳು ಸೃಜನಶೀಲವಾಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಕೆಲಸವಾಗಬೇಕು – ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ .ಈ
ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ. ಈ ಅವರು ಕ್ರೀಡಾಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕ್ರೀಡೆಯ ಮೂಲಕ ಮಕ್ಕಳಲ್ಲಿ ಮೌಲ್ಯಗಳನ್ನು ತುಂಬಲು ಸಾಧ್ಯವಾಗುತ್ತದೆ. ಮಕ್ಕಳ ಮನಸ್ಸನ್ನು ಅರ್ಥಮಾಡಿಕೊಂಡು ಕಲಿಸುವ ಕೆಲಸವಾಗಬೇಕು ಅಷ್ಟೆ ಅಲ್ಲದೆ ಕಲಿಕೆಯ ಜೊತೆಗೆ ಕ್ರೀಡೆ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಶಿಕ್ಷಕರು ಹಾಗೂ ಪೋಷಕರು ಸರಿಯಾದ ಮಾರ್ಗದರ್ಶನವನ್ನು ನೀಡಬೇಕಾಗಿದೆ. ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಮೌಲ್ಯಗಳನ್ನು ತುಂಬುವ ಕೆಲಸ ಆಗಬೇಕಾಗಿದೆ. ಆಧುನಿಕತೆಯ ಇಂದಿನ ದಿನಗಳಲ್ಲಿ ಗುಣಾತ್ಮಕ ಶಿಕ್ಷಣದ ಜೊತೆಗೆ ಸೃಜನಶೀಲ ಚಟುವಟಿಕೆಗಳಲ್ಲಿ ಗುರುತಿಸಿಕೊಳ್ಳುವಂತಾಗಬೇಕಾಗಿದೆ. ಜೀವನ ಸುಧಾರಣೆಗೆ ಶಿಕ್ಷಣ ತುಂಭಾ ಅಗತ್ಯವಾಗಿದೆ. ಹಾಗೆಯೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಗುರುತಿಸಿಕೊಳ್ಳಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಲಿಕೆಯು ಅಷ್ಟೆ ಮುಖ್ಯವಾಗಿದೆ. ಶಾಲೆಗಳಲ್ಲಿ ಉತ್ತಮವಾದ ಕಲಿಕಾ ಪರಿಸರವನ್ನುಂಟು ಮಾಡುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಚಾಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಅಬ್ದುಲ್ ಘನಿ, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಬಲೇಶ್ವರ, ತಾಲ್ಲೂಕು ಖಾಸಗಿ ಪ್ರೌಢಶಾಲೆಗಳ ನೌಕರರ ಸಂಘದ ಅಧ್ಯಕ್ಷ ಮಂಜಪ್ಪ ಎಸ್.ಆರ್. ಮಲೆನಾಡು ಪ್ರೌಢಶಾಲಾ ಮುಖ್ಯ ಶಿಕ್ಷಕ ಶೇಖರಪ್ಪ, ಯಡೇಹಳ್ಳಿ ಇಂದಿರಾಗಾಂಧಿ ವಸತಿ ಶಾಲೆ ಮುಖ್ಯ ಶಿಕ್ಷಕ ಚಂದ್ರಶೇಖರ್, ಸಾಧನಾ ವಿದ್ಯಾ ಕೇಂದ್ರದ ಮುಖ್ಯ ಶಿಕ್ಷಕ ಮಂಜುನಾಥ, ಶಿಕ್ಷಣ ಸಂಯೋಜಕರಾದ ವಿ.ಟಿ.ಸ್ವಾಮಿ, ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಕ್ರಿಯೇಟಿವ್ ಶಾಲಾ ಮುಖ್ಯ ಶಿಕ್ಷಕ ಪೃಥ್ವಿರಾಜ್ ಸ್ವಾಗತಿಸಿ, ಜಯಂತಿ ವಂದಿಸಿ, ಕೃಷ್ಣಮೂರ್ತಿ ನಿರೂಪಿಸಿದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇