ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಅವರ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಪ್ರಕಟಿಸಿದೆ.
ಗುರುವಾರ ತನ್ನ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ನಟ ದರ್ಶನ್ , ನಟಿ ಪವಿತ್ರ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಮಾಡಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರ್ಶನ್ ವಿವಿಧ ಕಾರಣಗಳಿಂದ ಜಾಮೀನು ದೊರಕಿತ್ತು .ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಈಗ ರಾಜ್ಯ ಸರ್ಕಾರದ ಪರವಾಗಿ ತೀರ್ಪು ಬಂದಿದೆ.
ದರ್ಶನ್ ಮತ್ತು ಇತರೆ ಆರು ಆರೋಪಗಳಿಗೆ ಜಾಮೀನು ನೀಡಿರುವ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂಕೋರ್ಟ್ ಬೇಸರ ವ್ಯಕ್ತಪಡಿಸಿತ್ತು.
ಜೈಲಿನಲ್ಲಿ ದರ್ಶನ್ ಗೆ ರಾಜಾತಿತ್ಯ ನೀಡದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದಿಂದ ನಟ ದರ್ಶನ್ ಸೇರಿದಂತೆ ಏಳು ಮಂದಿ ಮತ್ತೆ ಜೈಲು ಸೇರುವಂತಾಗಿದೆ.