ಶಿವಮೊಗ್ಗ : ಇಲ್ಲಿನ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅಭಿಮಾನಿಗಳು ಮಂತ್ರಾಲಯದ ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲೆಯ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿರುವ, ಜನಪರ ಕಾಳಜಿ ಹೊಂದಿರುವ ಸಂಸದರು ಒಳಿತಾಗಲಿ ಎನ್ನುವ ಉದ್ದೇಶದಿಂದ ಮಂತ್ರಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಸಿಗಂದೂರು ಸೇತುವೆ, ವಿಮಾನ ನಿಲ್ದಾಣ, ರೈಲ್ವೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ಇವರ ಶ್ರಮದ ಫಲವಾಗಿ ಶಿವಮೊಗ್ಗ ಹಿಂದೆಂದೂ ಕಾಣದ ಅಭಿವೃದ್ಧಿಯತ್ತ ಸಾಗುತ್ತಿದೆ. ಇವರ ಕೊಡುಗೆ ಹೀಗೆ ಸಾಗಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.
ಮಾಜಿ ಎಂ ಸಿ ಎ ನಿರ್ದೇಶಕ ಯುವ ಮುಖಂಡರಾದ ಹೆಚ್ ಆರ್ ತೀರ್ಥೇಶ್, ಪುನೀತ್, ಮಾಲತೇಶ್ ದರ್ಶನ್, ಶರಣಯ್ಯ ಸ್ವಾಮಿ, ವೀರೇಶ್, ಶರಣ್ ವೀರೇಂದ್ರ ಅವರು ಮಂತ್ರಾಲಯ ರಾಘವೇಂದ್ರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.