ಸಾಗರ : ಶರಾವತಿ ಕಣಿವೆ ಪ್ರದೇಶದಲ್ಲಿ ಸರ್ಕಾರ ಉದ್ದೇಶಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟ ಸಭೆ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆ ಸಾಗರದ ಗಣಪತಿ ದೇವಸ್ಥಾನದಿಂದ ಹೊರಟು ಗಾಂಧಿ ಮೈದಾನದಲ್ಲಿ ಬಹಿರಂಗ ಸಭೆ ನಡೆಯಿತು.
ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ಮಾತನಾಡಿ, ಶರಾವತಿ ನಮ್ಮ ಜೀವನಾಡಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಈಗ ಅವಕಾಶ ಕೊಟ್ಟರೆ ಮುಂದೆ ಬೆಂಗಳೂರಿಗೆ ಶರಾವತಿ ನೀರು ತೆಗೆದುಕೊಂಡು ಹೋಗಲು ಅವಕಾಶ ಮಾಡಿಕೊಟ್ಟಂತೆ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಮ್ಮ ಪಕ್ಷ ಪ್ರೀತಿಯ ಪಕ್ಷ, ನಾವು ಯಾವುದೇ ಪಕ್ಷದ ಪರವಾಗಿ ಹೋರಾಟ ನಡೆಸುವುದಿಲ್ಲ. ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಲು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಹೋರಾಟದಲ್ಲಿ ಸಕ್ರಿಯ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದರು.
ಮಾಜಿ ಸಚಿವ ಹರತಾಳು ಹಾಲಪ್ಪ, ಬಳಸಗೋಡು ಮಠದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಜಡೆ ಮಠದ ಕುಮಾರ ಕೆಂಪಿನ ಸಿದ್ದ ವೃಷಭೇಂದ್ರ ಸ್ವಾಮೀಜಿ, ನಗರಸಭೆಯ ಅಧ್ಯಕ್ಷ ಮೈತ್ರಿ ಪಾಟೀಲ್ ಉಪಾಧ್ಯಕ್ಷ ಸವಿತಾ ವಾಸು, ಪರಿಸರವಾದಿ ಅಖಿಲೇಶ್ ಚಿಪ್ಪಳಿ ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇👇





