ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ – ಶಾಸಕ ಗೋಪಾಲಕೃಷ್ಣ ಬೇಳೂರು – Provide quality education to children – MLA Gopalakrishna Belur suggests

On: September 25, 2025 10:19 AM
Follow Us:
---Advertisement---

ಸಾಗರ : ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದರು.

ಅವರು ಸಾಗರ ತಾಲ್ಲೂಕಿನ ಹೊಸೂರು ಸಮೀಪದ ಕೋಣನತಲೆ ಗ್ರಾಮದಲ್ಲಿರುವ ಕಾಲಭೈರವ ದೇವಸ್ಥಾನದ ಮುಂಭಾಗ ಭೈರವ ಸ್ತಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದರು.beluru hsr 1

ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಯಾವುದೇ ಸಮಾಜದ ಅಭಿವೃದ್ಧಿಯಾಗುತ್ತದೆ. ನಿಮ್ಮ ಜಾನಪದ ಕಲೆಯಿಂದ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದೀರಿ. ಆದರೆ ಮಕ್ಕಳಿಗೆ ಜಾನಪದ ಕಲೆಯ ಜೊತೆಗೆ ಉನ್ನತ ವಿದ್ಯಾಭ್ಯಾಸ ನೀಡುವುದರ ಮೂಲಕ ವಿವಿಧ ಹುದ್ದೆಗಳನ್ನು ಅಲಂಕರಿಸುವ ರೀತಿಯಲ್ಲಿ ಶಿಕ್ಷಣ ನೀಡಬೇಕೆಂದು ಸಲಹೆ ನೀಡಿದರು.

ಯಾವುದೇ ಕಾರಣಕ್ಕೂ ಮೂಢನಂಬಿಕೆಗಳ ಮೊರೆ ಹೋಗಬೇಡಿ, ದೇವರಲ್ಲಿ ಭಕ್ತಿಯಿಂದ ದೇವರ ಪೂಜೆ ಮಾಡಿ ನಂಬಿಕೆ ಇಟ್ಟರೆ ಪುಣ್ಯ ಲಭಿಸುತ್ತದೆ ಎಂದು ಹೇಳಿದರು.beluru hsr 2

ಹಿಂದೂ ಧರ್ಮದಲ್ಲಿ ಧಾರ್ಮಿಕ ನಂಬಿಕೆಯಾಗಿ ನೆಲೆ ಊರಿದೆ. ಪ್ರತಿಯೊಬ್ಬರಿಗೂ ದೇವರ ಮೇಲೆ ಅಪಾರ ನಂಬಿಕೆ ಇದೆ. ಪ್ರತಿ ವರ್ಷವೂ ಸಹ 40 ರಿಂದ 50 ದೇವಸ್ಥಾನಗಳಿಗೆ ಅನುದಾನವನ್ನು ನೀಡುತ್ತಾ ಬಂದಿರುವೆ. ಈಗಾಗಲೇ 94 ದೇವಸ್ಥಾನಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರೇವತಿ ವಹಿಸಿದ್ದರು. ಕಾಲಭೈರವ ಜೋಗಿ ಚಾರಿಟೇಬಲ್ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಕೆ ಗುಡ್ಡಪ್ಪ ಜೋಗಿ, ಹೊಸೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಚೌಡಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಶರತ್, ಪ್ರಮುಖರಾದ ಲೋಕೇಶ್, ದಿನೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜ ನಾಯ್ಕ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment