ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

Big Boss Kannada: ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಬೀಗ

On: October 7, 2025 2:47 PM
Follow Us:
---Advertisement---

ಕೆಲವೇ ದಿನಗಳ ಹಿಂದೆ ಶುರುವಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಗೆ ದೊಡ್ಡ ಸಂಕಷ್ಟ ಎದುರಾಗಿದೆ.

ಮಾಲಿನ್ಯ ನಿಯಂತ್ರಣ ಅನುಮತಿ ಪಡೆದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ಶೋ ಆರಂಭವಾದ ಎರಡನೇ ವಾರಕ್ಕೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ.

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಜಾಲಿವುಡ್ ಸ್ಟುಡಿಯೋಸ್ ಇದೆ. ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಾಮನಗರ ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲಿ ಬೀಗ ಹಾಕಲಾಗಿದೆ.

ಅನಧಿಕೃತವಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಆರೋಪದ ಮೇಲೆ ಜನಪ್ರಿಯ ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿರುವ ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಎಂಟರ್ಟೈನ್ಮೆಂಟ್ ಪಾರ್ಕ್ ಗೆ ತಹಶೀಲ್ದಾರ್ ತೇಜಸ್ವಿನಿ ಅವರು ಮಂಗಳವಾರ ಬೀಗ ಹಾಕಿದರು.

ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 12 ನಡೆಯುತ್ತಿದ್ದು 17 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿದ್ದಾರೆ. ಜಾಲಿವುಡ್ ಸ್ಟುಡಿಯೋದಲ್ಲಿ ತ್ಯಾಜ್ಯ ಸಂಸ್ಕರಣೆ ಸರಿಯಾಗಿ ಆಗಿಲ್ಲ ಎಂಬ ಆರೋಪದಡಿ  ಬೀಗ ಜಡಿಯಲಾಗಿದ್ದು,  ಬಿಗ್ ಬಾಸ್ ಶೋ ಆಯೋಜಕರು  ಶೋ ಮುಂದುವರಿಸಲು ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುವುದನ್ನು ಕಾದು ನೋಡಬೇಕಾಗಿದೆ.

Join WhatsApp

Join Now

Join Telegram

Join Now

Leave a Comment