ಸಾಗರ : ತಾಲ್ಲೂಕಿನ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸುವುದರ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗದ ನೆಹರೂ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಕ್ರಿಯೇಟಿವ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಸಮೃದ್ಧ್, ಗಗನ್, ದರ್ಶಿತ್, ಪಾರ್ಥ, ವಿನುತ್, ಪ್ರೀತಮ್, ಸಮರ್ಥ್, ಆಕಾಶ್, ಶಶಾಂಕ್, ಧನುಷ್, ನಿತಿನ್ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ. ದೈಹಿಕ ಶಿಕ್ಷಕರಾದ ಉಪೇಂದ್ರ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ
ಜಿಲ್ಲಾ ಮಟ್ಟದಲ್ಲಿ ಜಯಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಿಗೆ ಆನಂದಪುರದಲ್ಲಿ ಭವ್ಯ ಸ್ವಾಗತ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಪೃಥ್ವಿರಾಜ್, ಶಿಕ್ಷಕರಾದ ಕೃಷ್ಣಮೂರ್ತಿ, ಸಂತೋಷ್, ಗೋಪಿ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.





