ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ನುರಿತ ವೈದ್ಯರ ವರ್ಗಾವಣೆ – ಮಾರ್ಚ್ 2ರಂದು ಬೃಹತ್ ಪ್ರತಿಭಟನೆ – ರತ್ನಾಕರ್ ಹೊನಗೋಡು. Transfer of skilled doctors – massive protest on March 2.

On: February 25, 2026 10:34 AM
Follow Us:
---Advertisement---

ಸಾಗರ : ಸಮುದಾಯ ಆರೋಗ್ಯ ಕೇಂದ್ರದ ನುರಿತ ವೈದ್ಯರನ್ನು ತಾಲ್ಲೂಕು ಕೇಂದ್ರಕ್ಕೆ ವರ್ಗಾವಣೆ ಖಂಡಿಸಿ ಮಾರ್ಚ್ 2 ರಂದು ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ಎದುರು ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ್ ಹೊನಗೋಡು ಹೇಳಿದರು.

ಅವರು ಆನಂದಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಸಂಖ್ಯೆ ಕಡಿಮೆ ಯಾಗುತ್ತಿವೆ ಎಂಬ ಕಾರಣ ನೀಡಿ ಸರ್ಕಾರ ಹಾಗೂ ಆರೋಗ್ಯ ಇಲಾಖೆ ನುರಿತ ತಜ್ಞರನ್ನು ತಾಲೂಕು ಕೇಂದ್ರಕ್ಕೆ ವರ್ಗಾವಣೆ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವರ್ಗಾವಣೆ ಮಾಡುವ ಮೊದಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆಚ್ಚಿನ ಆಧುನಿಕ ವೈದ್ಯಕೀಯ ಸೌಲಭ್ಯಗಳು ನೀಡುವ ಗಮನ ಹರಿಸಿ. ಜನರು ಚಿಕಿತ್ಸೆಗಾಗಿ ತಾಲೂಕು ಕೇಂದ್ರಕ್ಕೆ ಸುಮಾರು 50 km ದೂರ ಸಂಚಾರ ನಡೆಸುವುದು ಅಸಾಧ್ಯವಾಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಸೌಲಭ್ಯ ನೀಡಿದಾಗ ತುರ್ತು ಸಂದರ್ಭದಲ್ಲಿ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಆನಂದಪುರದ ಹೋಬಳಿ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಇರುವುದರಿಂದ ಹಲವು ಅಪಘಾತಗಳು ನಿರಂತರವಾಗಿ ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸೆ ಅವಶ್ಯಕತೆ ಇದೆ. ಆದ್ದರಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ವೈದ್ಯರನ್ನು ತಾಲೂಕು ಕೇಂದ್ರಕ್ಕೆ ವರ್ಗಾವಣೆ ಮಾಡಬಾರದು. ಜೊತೆಗೆ ಹೆಚ್ಚಿನ ನುರಿತ ವೈದ್ಯರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಸಮುದಾಯ ಆರೋಗ್ಯ ಕೇಂದ್ರದಿಂದ ತಾಲೂಕು ಕೇಂದ್ರಕ್ಕೆ ವೈದ್ಯರ ವರ್ಗಾವಣೆಯ ನಿರ್ದಾರವನ್ನು ಸರ್ಕಾರ ಹಿಂಪಡೆಯದಿದ್ದರೆ ಮಾರ್ಚ್ 2 ರಂದು ಬೃಹಪ್ರ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯದಲ್ಲಿಯೇ ಸಾಗರ ತಾಲೂಕು ವಿವಿಧ ಇಲಾಖೆಗಳ ಆಡಳಿತ ವ್ಯವಸ್ಥೆಯಲ್ಲಿ ಮಾದರಿಯಾಗಿದೆ. ಆದರೆ ಈ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಹಾಲಿ ಶಾಸಕರು ವಿಫಲರಾಗಿದ್ದಾರೆ. ಕಂದಾಯ ಅರಣ್ಯ ಪೊಲೀಸ್ ಇಲಾಖೆಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದರೂ ಅದರ ಬಗ್ಗೆ ಶಾಸಕರು ಗಮನ ಹರಿಸುತ್ತಿಲ್ಲ ಎಂದು ಹೇಳಿದರು.

ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ ಕಾಲಾವಧಿಯಲ್ಲಿ ಅಭಿವೃದ್ಧಿಗಳನ್ನು ಹೊರತುಪಡಿಸಿದರೆ ಇವರ ಕಾಲಾವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ.  ಗ್ರಾಮ ಪಂಚಾಯಿತಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಇಲ್ಲದ ಸಂದರ್ಭದಲ್ಲಿ ಶಾಸಕರು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ನಿರ್ವಹಿಸದ ಕಾರಣ ಕೆಲ ಅಧಿಕಾರಿಗಳು ಸಹ ಕೆಲಸವನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ಅಭಿವೃದ್ಧಿ ಸ್ಥಗಿತ ಹಾಗೂ ಸಾರ್ವಜನಿಕರಿಗೆ ಹಲವು ಇಲಾಖೆಯಲ್ಲಿ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರ ನೇತೃತ್ವದಲ್ಲಿ ತಾಲೂಕಿನಾದ್ಯಂತ ಮುಂದಿನ ದಿನಗಳಲ್ಲಿ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಮಂಜುನಾಥ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಮೋಹನ್, ಗುರುರಾಜ್, ಮಾಜಿ ಸದಸ್ಯರಾದ ಮೋಹನ್, ಪ್ರಮುಖರಾದ ಸುಬ್ರಹ್ಮಣ್ಯ ಇದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment