ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು – ದೂರು ದಾಖಲು. Illegal sand storage at creative international school -File a complaint.

On: April 8, 2026 12:41 PM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ಆಚಾಪುರ ಬಳಿ ಇರುವ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಅಕ್ರಮ ಮರಳು ದಾಸ್ತಾನು ಮಾಡಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

ಕರ್ನಾಟಕ ಲೋಕಾಯುಕ್ತ ಇನ್ಸ್ ಪೆಕ್ಟರ್ ಸೂಚನೆ ಮೇರೆಗೆ ಹಿರಿಯ ಭೂ ವಿಜ್ಞಾನಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಚಾಪುರ ಬಳಿ ಇರುವ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣಕ್ಕೆ ಹೋಗಿ ಸ್ಥಳ ಪರಿಶೀಲನೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ.

ಮರಳಿಗೆ ಸಂಬಂಧಪಟ್ಟಂತೆ ಶಾಲೆಯ ಮುಖ್ಯ ಶಿಕ್ಷಕರನ್ನು ವಿಚಾರಿಸಿದಾಗ ಯಾವುದೇ ಅಧಿಕೃತ ಪರವಾನಿಗೆಗಳನ್ನು ಹಾಜರುಪಡಿಸಿಲ್ಲ. ಜೊತೆಗೆ ಸಂಬಂಧಪಟ್ಟ ಇಲಾಖೆಯ ತಂತ್ರಾಂಶದಲ್ಲೂ ಸಹ ಆಚಾಪುರ ಸ್ಥಳಕ್ಕೆ ಸಂಬಂಧಪಟ್ಟಂತೆ ಯಾವುದೇ ಪರವಾನಿಗೆಗಳು ಸಹ ದಾಖಲಾಗಿಲ್ಲ. ಈ ಹಿನ್ನೆಲೆಯಲ್ಲಿ 264 ಮೆಟ್ರಿಕ್ ಟನ್ ಮರಳನ್ನು ಯಾವುದೇ ಪರವಾನಿಗೆಲ್ಲದೆ ಅಕ್ರಮ ಸಾಗಾಣಿಕೆ ಮಾಡಿ ದಾಸ್ತಾನು ಮಾಡಿಕೊಂಡ ಹಿನ್ನೆಲೆಯಲ್ಲಿ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್ ಆಡಳಿತ ಮಂಡಳಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆನಂದಪುರ ಪೊಲೀಸ್ ಠಾಣೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಜ್ಯೋತಿ ಕೆ.ಕೆ ಅವರು  ದೂರು ನೀಡಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment