ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ. siddaramaiah resigns as chief minister.

On: May 28, 2026 10:38 AM
Follow Us:
---Advertisement---

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮೇ.28 ರಂದು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ ಭವನಕ್ಕೆ ಹೋಗಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಹಲವು ತಿಂಗಳುಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಕೇಳುತ್ತಿದ್ದ ಸಿಎಂ ಬದಲಾವಣೆ ಹಾಗೂ ರಾಜೀನಾಮೆ ವದಂತಿಗಳಿಗೆ ಈಗ ಅಧಿಕೃತ  ತೆರೆ ಬಿದ್ದಂತಾಗಿದೆ . ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

ನವ ದೆಹಲಿಯಲ್ಲಿ ನಡೆದ ಪಕ್ಷದ ಹೈಕಮಾಂಡ್ ಸಭೆಯಲ್ಲಿ ನೀಡಿರುವ ಸೂಚನೆಯಂತೆ ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

3 ವರ್ಷ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ

ಮೇ 2023 ರಲ್ಲಿ ಅಧಿಕಾರ ಸ್ವೀಕಾರ ಮಾಡಿದ ಸಿದ್ದರಾಮಯ್ಯ ಅವರು ಮೂರು ವರ್ಷಗಳ ಕಾಲ ಆಡಳಿತ ನಡೆಸಿ ಮೇ 28 2026 ರಂದು ರಾಜಭವನದಲ್ಲಿ ರಾಜೀನಾಮೆ ಪತ್ರ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ

ರಾಜ ಭವನಕ್ಕೆ ಹೋಗಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ರಾಜೀನಾಮೆ ಸಲ್ಲಿಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲೇ ಹೇಳಿದಂತೆ ಹೈಕಮಾಂಡ್ ಅವರು ಯಾವಾಗ ಸೂಚನೆ ನೀಡುತ್ತಾರೋ ಆವಾಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೇ, ಅದರಂತೆ ಇಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ಈ ಬಾರಿ 135 ಸ್ಥಾನಗಳನ್ನು ಪಡೆದಿದ್ದೇವೆ.  ಮತದಾರರೇ ನನಗೆ ಅಭಿಮಾನಿ ದೇವರುಗಳು. ಎರಡು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುವಅವಕಾಶ ಸಿಕ್ಕಿತ್ತು. ಜೊತೆಗೆ ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನನಗೆ ಅವಕಾಶ ನೀಡಿದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ಕಾರ್ಯಕರ್ತರಿಗೆ ಮುಖಂಡರಿಗೆ ಧನ್ಯವಾದ ತಿಳಿಸಿದರು.

ನಾನು ರಾಜಕಾರಣಕ್ಕೆ ಬಂದಿದ್ದೆ ಆಕಸ್ಮಿಕ, ನನ್ನ ಕುಟುಂಬದ ಯಾರು ಸಹ ರಾಜಕಾರಣಕ್ಕೆ ಬಂದಿರಲಿಲ್ಲ. ಹಳ್ಳಿಗಾಡಿನಿಂದ ಬಂದು 2 ಬಾರಿ ಸಿಎಂ ಆಗಿದ್ದೇನೆ. ನಾನು ಬುದ್ಧ ಬಸವ ಅಂಬೇಡ್ಕರ್ ಗಾಂಧೀಜಿ ತತ್ವಗಳನ್ನು ಪಾಲಿಸಿಕೊಂಡು ಬಂದಿರುವ ವ್ಯಕ್ತಿ. ಸಂವಿಧಾನದ ಮೇಲೆ ಅಪಾರವಾದ ಗೌರವವನ್ನು ಇಟ್ಟುಕೊಂಡಿದ್ದೇನೆ. ಶಾಸಕನಾಗುತ್ತೇನೆ ಮಂತ್ರಿಯಾಗುತ್ತೇನೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಹ ಕನಸು ಕಂಡಿರಲಿಲ್ಲ ಎಂದು ಹೇಳಿದರು.

ಘೋಷಣೆ ಮಾಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಪ್ರಾಮಾಣಿಕ ಕೆಲಸ ಮಾಡಿದ್ದೇವೆ. 2018 ರಲ್ಲಿ 165 ಭರವಸೆ ನೀಡಿದ್ದೆ ಅದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ. ಐದು ಗ್ಯಾರಂಟಿ ಯೋಜನೆಗಳನ್ನು ಮೊದಲ ವರ್ಷವೇ ಈಡೇರಿಸಿದ್ದೇವೆ. ಈವರೆಗೆ 1.42 ಲಕ್ಷ ಕೋಟಿ ಹಣವನ್ನು ಗ್ಯಾರಂಟಿಗಾಗಿ ಖರ್ಚು ಮಾಡಿದ್ದೇವೆ. ಗ್ಯಾರಂಟಿ ಘೋಷಣೆ ಮಾಡಿದಾಗ ವಿರೋಧಪಕ್ಷದವರು ರಾಜ್ಯದಿವಾಳಿ ಆಗುತ್ತೆ ಎಂದು ಹೇಳಿದ್ದರು. ಯೋಜನೆಯ ನಂತರ ದೇಶದಲ್ಲಿ ಕರ್ನಾಟಕ ತಲಾದಯದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ರಾಜ್ಯದ ಬೆಳವಣಿಗೆ ಶೇಕಡಾ 8.2 ರಷ್ಟಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಹಣಕಾಸು ನಿಯಮದ ಪ್ರಕಾರವೇ ಮಾಡಿದ್ದೇನೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿರುವಂತೆ ಕೆಲಸ ನಿರ್ವಹಿಸಲಾಗಿದೆ.

15ನೇ ಹಣಕಾಸು ಆಯೋಗದಂತೆ ಕೇಂದ್ರ ಸರಿಯಾಗಿ ರಾಜ್ಯಕ್ಕೆ ಅನುದಾನ ನೀಡುತ್ತಿಲ್ಲ. ರಾಜ್ಯದ ಹಣಕಾಸು ಯೋಜನೆಗಳಿಗೆ ಕೇಂದ್ರ ಸರಿಯಾಗಿ ಅನುದಾನ ನೀಡುತ್ತಿಲ್ಲ. ರಾಜ್ಯದ ಆದಾಯದ ಕೊರತೆಗೆ ಕೇಂದ್ರದ ತಾರತಮ್ಯ ನೀತಿಯೇ ಕಾರಣವಾಗಿದೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ನುಡಿದಂತೆ ನಡೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ನಾನು ಯಾವತ್ತೂ ಹಣದ ಹಿಂದೆ ಅಧಿಕಾರದ ಹಿಂದೆ ಓಡಿ ಹೋದವನಲ್ಲ, ಆಸ್ತಿ ಪಾಸ್ತಿ ಮಾಡಿಕೊಳ್ಳಬೇಕು ಇಂದು ನಾನು ಬಯಸಿದವನಲ್ಲ, 2028ಕ್ಕೆ ರಾಜಕಾರಣಕ್ಕೆ ಬಂದು 50 ವರ್ಷಗಳಾಗಲಿದೆ. ನಾನು ನಂಬಿರುವ ಸಿದ್ಧಾಂತದಲ್ಲಿ ಯಾವತ್ತೂ ರಾಜೀ ಮಾಡಿಕೊಂಡಿಲ್ಲ ಎಂದು ಹೇಳಿದರು.

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ

ಹೈಕಮಾಂಡ್ ಅವರು ರಾಜ್ಯಸಭಾ ಸದಸ್ಯರಾಗಿ ಎಂದು ಹೇಳಿದ್ದಾರೆ. ಆದರೆ ನಾನು ವಿನಮ್ರವಾಗಿ ತಳ್ಳಿ ಹಾಕಿದ್ದೇನೆ. ನಾನು ಸಕ್ರಿಯವಾಗಿ ರಾಜ್ಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ.  ಶಾಸಕಾಂಗ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

 

 

 

Join WhatsApp

Join Now

Join Telegram

Join Now

Leave a Comment