ಸಾಗರ : ತಾಲೂಕಿನ ಆನಂದಪುರ ಸಮೀಪದ ಉಳ್ಳೂರು ಬಳಿ ಬೈಕ್ ಒಂದರಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ , ಸಾಗರದ ಮಾನ್ಯ ಸಹಾಯಕ ಪೊಲೀಸ್ ಅಧೀಕ್ಷಕರಿಗೆ ಮಾಹಿತಿ ನೀಡಿ, ಅವರ ಆದೇಶದಂತೆ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ನೇತೃತ್ವದಲ್ಲಿ ಬೈಕ್ ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾ ಪತ್ತೆಯಾಗಿದೆ.
ಸಾಗರ ಕಡೆಯಿಂದ ಆನಂದಪುರದ ಕಡೆಗೆ ಬೈಕಿನಲ್ಲಿ ಗಾಂಜಾ ಇಟ್ಟುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಉಳ್ಳೂರಿನಲ್ಲಿ ದಾಳಿ ನಡೆಸಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರ ಬಂಧನ ಹಾಗೂ ಬೈಕ್ ವಶ
ಅಕ್ರಮ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಬೈಕಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4752 ರೂ. ಮೌಲ್ಯದ 95 ಗ್ರಾಂ ತೂಕದ ಗಾಂಜಾ ಪದಾರ್ಥ ಹಾಗೂ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಜ್ಜು ಅಲಿಯಸ್ ಮುಜಾಮಿಲ್ ಹಾಗೂ ಹಪೀಜುಲ್ಲಾ ಎಂಬುದನ್ನು ಬಂಧನ ಮಾಡಿದ್ದು, ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





