ಸಾಗರ : ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಬಳಿ ರಾಷ್ಟ್ರೀಯ ಹೆದ್ದಾರಿ (69) ರಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಅಪಘಾತ ಸಂಭವಿಸಿದ ಎರಡು ಬ್ರೆಝಾ ಕಾರುಗಳು ಎಂದು ತಿಳಿದುಬಂದಿದೆ. ಸಾಗರದಿಂದ ಆನಂದಪುರಕ್ಕೆ ಹೋಗುತ್ತಿದ್ದ ಕಾರು ಹಾಗೂ ಆನಂದಪುರದಿಂದ ಸಾಗರಕ್ಕೆ ಹೋಗುತ್ತಿದ್ದ ಕಾರುಗಳು ಆನಂದಪುರ ಸಮೀಪದ ಐಗಿನಬೈಲು ಬಳಿ ಮುಖ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಒಂದಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.





