ಸಾಗರ : ಬೈಕ್ ಹಾಗೂ ಟಿಟಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಹೆಚ್ಚಿನ ಪ್ರಮಾಣದ ಗಾಯವಾದ ಘಟನೆ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಆನಂದಪುರದ ಪೊಲೀಸ್ ಠಾಣೆಯ ಸಮೀಪ ನಡೆದಿದೆ.
ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಟಿಟಿ ಹಾಗೂ ಆನಂದಪುರದಿಂದ ಸಾಗರದ ಕಡೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಟಿಟಿ ವಾಹನದ ಅಡಿಗೆ ಸಿಲುಕಿ ಎಳೆದುಕೊಂಡು ಹೋಗಿದೆ. ಪರಿಣಾಮವಾಗಿ ಬೈಕ್ ಸವಾರನಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂಬ ಮಾಹಿತಿ ಬಂದಿದೆ.
ಟಿಟಿ ವಾಹನವು ಶಿವಮೊಗ್ಗದಿಂದ ಜೋಗ ನೋಡಲು ಹೋಗಿ ಬರುವಾಗ ಆನಂದಪುರ ಸಮೀಪ ಈ ಘಟನೆ ನಡೆದಿದೆ. ಟಿಟಿ ವಾಹನದಲ್ಲಿ ಇದ್ದವರಿಗೆ ಯಾವುದೇ ತೊಂದರೆಯಾಗಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.
ಆನಂದಪುರದ ಪಿಎಸ್ಐ ಪ್ರವೀಣ್ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ಸವಾರನು ಸ್ಥಳೀಯ ನಿವಾಸಿ ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.





