ಗ್ರಾಹಕರಿಗೆ ಗುಡ್ ನ್ಯೂಸ್ : ಇಂದಿನಿಂದ ಆರಂಭವಾಗಬೇಕಾಗಿದ್ದ ಬ್ಯಾಂಕ್ ಮುಷ್ಕರ ಮುಂದೂಡಿಕೆ
ಬೆಂಗಳೂರು : ಸೆಪ್ಟೆಂಬರ್ 28ರಿಂದ 30ರವರೆಗೆ ನಡೆಯಬೇಕಾಗಿದ್ದ ಮೂರು ದಿನಗಳ ದೇಶ ವ್ಯಾಪಿ ಬ್ಯಾಂಕ್ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಈ ಹಿನ್ನಲೆಯಲ್ಲಿ ಎಲ್ಲಾ ಬ್ಯಾಂಕುಗಳು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
UFBU ಸೆಪ್ಟೆಂಬರ್ 28 ರಿಂದ 30 ವರೆಗೆ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ IBA ಹಾಗೂ UFBU ನಡುವೆ ನಡೆದ ಮಹತ್ವದ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮುಷ್ಕರವನ್ನು ಮುಂದೂಡಲಾಗಿದೆ.
ಇಂದು ಬ್ಯಾಂಕ್ ಓಪನ್ – ನಿಟ್ಟುಸಿರುಬಿಟ್ಟ ಗ್ರಾಹಕರು
IBA ಹಾಗೂ UFBU ನಡುವೆ ನಡೆದ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬ್ಯಾಂಕ್ ಮುಷ್ಕರ ಮುಂದೂಡಲಾಗಿದೆ. ಈ ಹಿನ್ನಲೆಯಲ್ಲಿ ಬ್ಯಾಂಕುಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ. ಎಂದಿನಂತೆ ಸೇವೆಗಳು ಲಭಿಸಲಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.







