ಸಾಗರ : ಚೆಸ್ ಚಾಂಪಿಯನ್ ಶಿಪ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ವಿದ್ಯಾರ್ಥಿಗಳಾದ ಅದಿತಿ ಹಾಗೂ ಶರಧಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತುಮಕೂರಿನ ಬಿಷಪ್ ಸಾರ್ಜೆಂಟ್ ಶಾಲೆಯಲ್ಲಿ ನಡೆದ ಸಿಐಎಸ್ಈ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ರಾಷ್ಟ್ರೀಯ ವಸತಿ ಶಾಲೆಯ ಅದಿತಿ. ಪಿ.ಶೆಟ್ಟಿ ಹಾಗೂ ಆರ್. ಶರಧಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅದಿತಿ.ಪಿ. ಶೆಟ್ಟಿ ಪ್ರಥಮ ಸ್ಥಾನ ಪಡೆದರೆ, ಆರ್ ಶರಧಿ ನಾಲ್ಕನೆಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.