ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ತಪ್ಪಿದ ಸಚಿವ ಸ್ಥಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಬೇಳೂರು

On: August 3, 2026 9:48 AM
Follow Us:
---Advertisement---

ಬೆಂಗಳೂರು : ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದ ನೂತನ ಸಚಿವರ ಪಟ್ಟಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹೆಸರು ಪಟ್ಟಿಯಲ್ಲಿ ಇಲ್ಲದಿರುವುದಕ್ಕೆ ಅಸಮಾಧಾನಗೊಂಡಿದ್ದಾರೆ.

ಸಚಿವ ಸ್ಥಾನ ನೀಡದ ಹಿನ್ನಲೆಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಾಬಲ್ಯರಿಗೆ ಮಾತ್ರ ಅವಕಾಶ

ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಪ್ರಾಬಲ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಮಕ್ಕಳು, ಪ್ರಾಬಲ್ಯರಿಗೆ ಅವಕಾಶ ನೀಡಲಾಗಿದೆ. ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿರಲಿಲ್ಲ. ನಿನ್ನೆ ರಾತ್ರಿವರೆಗೂ ನನ್ನ ಹೆಸರು ಲಿಸ್ಟ್ ನಲ್ಲಿತ್ತು. ಆದರೆ ಇಂದು ನನ್ನ ಹೆಸರನ್ನ ತೆಗೆದುಹಾಕಲಾಗಿದೆ ಎಂದು ಅಸಮಾಧಾನಗೊಂಡಿದ್ದಾರೆ.

ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹೇಳಿಕೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಇವರ ಈ ನಿರ್ಧಾರದಿಂದಾಗಿ ರಾಜ್ಯ ರಾಜಕೀಯದಲ್ಲಿ ಹೊಸ ತಿರುಗು ಪಡೆದುಕೊಳ್ಳುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಪಕ್ಷದ ಮುಖಂಡರುಗಳು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

Join WhatsApp

Join Now

Join Telegram

Join Now

Leave a Comment