ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಅರಣ್ಯ ಪ್ರದೇಶಗಳಲ್ಲಿ ಮೇಕೆ ಕುರಿ ದನಕರುಗಳನ್ನು ಮೇಯಿಸುವುದು ನಿಷೇಧ -ಈಶ್ವರ್ ಬಿ.ಖಂಡ್ರೆ

On: July 22, 2025 3:13 PM
Follow Us:
---Advertisement---

ಶಿವಮೊಗ್ಗ : ಅರಣ್ಯ ಪ್ರದೇಶದೊಳಗೆ ಮೇಕೆ ಕುರಿ ದನಕರುಗಳು ಮೆಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ, ಜೀವಿ ಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ವಿಷಯವಾಗಿ ಇಲಾಖೆಯ ಅಪಾರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಹೊಡೆದ ಚಿಕ್ಕ ಪುಟ್ಟ ಸಸಿಗಳು ಸಾಕುಪ್ರಾಣಿಗಳಿಗೆ ಆಹಾರವಾಗಿ ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಬೆಳೆಯಲು ಅಡ್ಡಿಯಾಗುತ್ತದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯ ಪಟ್ಟಿರುವುದಾಗಿ ತಿಳಿಸಿದ್ದಾರೆ.Eshwar khandre minister

ದೊಡ್ಡ ಸಂಖ್ಯೆಯ ಸಾಕುಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಾಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಪ್ರಮುಖವಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆ ಆಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ – ಮಾನವ ಸಂಘರ್ಷ ಹೆಚ್ಚಳವಾಗುತ್ತದೆ. ಕಾಡಿನೊಳಗೆ ಹೋಗುವ ದನಗಾಯಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲು ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯದಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಪರಿಸರವಾದಿಗಳು ಅಭಿಪ್ರಾಯ ಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತಿಯ ಕ್ರಮ ವಹಿಸಲು ಸೂಚಿಸಿದ್ದಾರೆ.

ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ ಆಕ್ರೋಶಗೊಂಡ ಕೆಲವರು ಮೃತ ಜಾನುವಾರುಗಳಿಗೆ ವಿಷ ಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿರುತ್ತದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯ ಪಟ್ಟಿರುತ್ತಾರೆ.Eshwar khandre order 1

ಪ್ರಮುಖವಾಗಿ ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಅರಣ್ಯದೊಳಗೆ ಸಾಕುಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ನೀಡಿದ ತೀರ್ಪಿನ ಬಳಿಕ ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯಕ್ಕೆ ದನಕರಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ.

ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಹಾಗೂ ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಿಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಲು ಮತ್ತು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸಲು ಸೂಚಿಸಿದ್ದಾರೆ.Eshwar khandre order

Join WhatsApp

Join Now

Join Telegram

Join Now

Leave a Comment