ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ರಾಜ್ಯ ಸರ್ಕಾರಿ ನೌಕರ ಸಂಘದ ಗದಗ ಜಿಲ್ಲಾ ಅಧ್ಯಕ್ಷರಾದ ಬಸವರಾಜ್ ಹುಟ್ಟುಹಬ್ಬದ ಅಂಗವಾಗಿ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

On: July 21, 2026 3:49 PM
Follow Us:
---Advertisement---

ಗದಗ : ರಾಜ್ಯ ಸರ್ಕಾರಿ ನೌಕರ ಸಂಘದ ಗದಗ ಜಿಲ್ಲಾಧ್ಯಕ್ಷರು ಹಾಗೂ ಅಮ್ಮ ಫೌಂಡೇಶನ್ ಮಾರ್ಗದರ್ಶಕರು ಆದ ಬಸವರಾಜ್ ಅವರ 49ನೇ (ಜೂನ್ 23) ಹುಟ್ಟುಹಬ್ಬದ ಅಂಗವಾಗಿ ಅಮ್ಮ ಫೌಂಡೇಶನ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಲಾಗುವುದು ಎಂದು ಅಮ್ಮ ಫೌಂಡೇಶನ್ ಅಧ್ಯಕ್ಷರು ಹಾಗೂ ವಕೀಲರಾದ ಮೈಲಾರಪ್ಪ ಡಿ.ಎಚ್ ತಿಳಿಸಿದರು.

mylarappa

ಹುಟ್ಟು ಹಬ್ಬದ ಅಂಗವಾಗಿ ಅಮ್ಮ ಫೌಂಡೇಶನ್ ವತಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕಿನ ಆಯ್ದ ಸರ್ಕಾರಿ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ಸುಮಾರು 1000 ಬ್ಯಾಗ್ ಹಾಗೂ ನೋಟ್ ಬುಕ್ ವಿತರಣೆ ಮಾಡಲಾಗುತ್ತಿದೆ.

ಇದಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಗುವುದು. ಜೊತೆಗೆ ಹುಟ್ಟುಹಬ್ಬದ ನೆನಪಿಗಾಗಿ 500 ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಅಮ್ಮ ಫೌಂಡೇಶನ್ ವತಿಯಿಂದ ಈ ಮಾದರಿಯಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಸಾಗುತ್ತಿದ್ದು, ಈ ಬಾರಿ ಸರ್ಕಾರಿ ಶಾಲೆಗಳಿಗೆ ಪ್ರಾಮುಖ್ಯತೆ ಕೊಟ್ಟಿದ್ದು ,ಇದರಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಹಳ್ಳಿಯ ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ಆರ್ಥಿಕ ಬಾರವನ್ನು ಕಡಿಮೆ ಮಾಡುವುದರ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ನಮ್ಮ ಸಣ್ಣ ಪ್ರಯತ್ನವಾಗಿದೆ ಎಂದು ಹೇಳಿದರು.

ಜೊತೆಗೆ ಅಮ್ಮ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ವಿಶೇಷ ಗೌರವ ಸನ್ಮಾನ ಕಾರ್ಯಕ್ರಮವನ್ನು ಗದಗ ನೌಕರರ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

Join WhatsApp

Join Now

Join Telegram

Join Now

Leave a Comment