ಸಾಗರ : ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭದ್ರ ಬುನಾದಿಯಾಗಿದೆ ಎಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಹೇಳಿದರು.
ಅವರು ತಾಲ್ಲೂಕಿನ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಸಾಗರ ಕ್ಷೇತ್ರದಲ್ಲಿ 50,000 ಜನರು ಈ ಪ್ರಯೋಜನವನ್ನು ಪಡೆಯುತ್ತಿವೆ. ಇಲ್ಲಿಯವರೆಗೆ 168 ಕೋಟಿ ಹಣವನ್ನು ಈ ಯೋಜನೆ ಅಡಿ ನೀಡಲಾಗಿದೆ. ಈ ಗ್ಯಾರಂಟಿ ಯೋಜನೆಗಳು ಬಡವರು ಆರ್ಥಿಕವಾಗಿ ಸದೃಢವಾಗಲು ಸಹಾಯಕವಾಗಿದೆ ಎಂದು ಹೇಳಿದರು.
ಅಭಿವೃದ್ಧಿ ಬಗ್ಗೆ ಟೀಕೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಅಭಿವೃದ್ದಿ ಮಾಡಿ ತೋರಿಸುತ್ತೇನೆ ಎಂದು ಸವಾಲು ಹಾಕಿದರು.
ಶಿಕ್ಷಣ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸರ್ಕಾರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲು ಹೆಚ್ಚಿನ ಒತ್ತು ನೀಡುತ್ತಿದೆ. 30 ಆಂಗ್ಲ ಮಾಧ್ಯಮ ಶಾಲೆಗಳನ್ನು ನೀಡಿದೆ. ಕ್ಷೇತ್ರಕ್ಕೆ ಈ ಭಾರಿ 20 ಅಂಗನವಾಡಿ ಕೇಂದ್ರಗಳು ಬಂದಿವೆ. ಪ್ರತಿ ಅಂಗನವಾಡಿ ಕೇಂದ್ರಕ್ಕೆ 20 ಲಕ್ಷ ವೆಚ್ಚದಲ್ಲಿ ನವೀನ ರೀತಿಯಲ್ಲಿ ಅಂಗನವಾಡಿ ಕೇಂದ್ರಗಳು ನಿರ್ಮಾಣವಾಗುತ್ತವೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕಡೆಯಿಂದ 50 ಕೋಟಿ 50 ಕೋಟಿ ಹಣ ಬಿಡುಗಡೆಯಾಗಿದ್ದು, ಅಭಿವೃದ್ಧಿಯ ಕಾರ್ಯ ಆರಂಭವಾಗಲಿದೆ. ಕೆರೆಗಳ ಪುನಶ್ಚೇತನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಮಳೆಗಾಲ ಮುಗಿದ ತಕ್ಷಣ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಹೊಸನಗರ ಸಾಗರ ಕ್ಷೇತ್ರಕ್ಕೆ 234 ಕಾಲು ಸಂಕಗಳು ಮಂಜೂರಾಗಿದ್ದು, ಸಾರ್ವಜನಿಕರ ರೈತರ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದರು.
ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ ಲ್ಯಾವಿಗೆರೆ ಮಾತನಾಡಿ, ವಾರಕ್ಕೊಮ್ಮೆ ಆನಂದಪುರದಲ್ಲಿ ಪ್ರೆಸ್ ಮೀಟ್ ಮಾಡಿ ಟೀಕೆ ಮಾಡುವವರಿಗೆ ಶಾಸಕರು ಅಭಿವೃದ್ಧಿ ಮೂಲಕ ತೋರಿಸುತ್ತಿದ್ದಾರೆ. ಅಭಿವೃದ್ಧಿಯನ್ನು ನೋಡಿ ಹೊಟ್ಟೆ ಉರಿಯಿಂದಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಅವರ ಪತ್ರಿಕ ಹೇಳಿಕೆಗೆ ಪ್ರತ್ಯುತ್ತರ ನೀಡದೆ ಅಭಿವೃದ್ಧಿಯ ಮೂಲಕ ಉತ್ತರ ನೀಡುತ್ತಿದ್ದೇವೆ ಎಂದು ಪರೋಕ್ಷವಾಗಿ ಹೆಸರೆಳದೆ ಬಿಜೆಪಿ ಮುಖಂಡರನ್ನು ಕಾಲೆಳೆದರು.
ಈ ಸಂದರ್ಭದಲ್ಲಿ ಆಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಲೀಮುಲ್ಲಾ ಖಾನ್, ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ್ ಲ್ಯಾವಿಗೆರೆ, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಗ್ರಾಮ ಪಂಚಾಯಿತಿಯ ಸದಸ್ಯರುಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇👇