ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

On: June 2, 2026 1:46 PM
Follow Us:
---Advertisement---

ಸಾಗರ : ನಿರಂತರವಾಗಿ ಸೋಮವಾರ ಸಂಜೆ ಸುರಿದ ಭಾರಿ ಪ್ರಮಾಣದ ಗಾಳಿ ಮಳೆಯಿಂದಾಗಿ ಅಪಾರ  ಹಾನಿ ಉಂಟಾಗಿದೆ.

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಆನಂದಪುರ ಹಾಗೂ ಸುತ್ತಮುತ್ತಲಿನ ಗ್ರಾಮದ ಮನೆ ,ಕೊಟ್ಟಿಗೆ ಆನಂದ ಪ್ರದ ಸಮುದಾಯ ಆರೋಗ್ಯ ಕೇಂದ್ರದ ಕಾಂಪೌಂಡ್ ಗಳಿಗೆ ಹಾನಿ ಉಂಟಾಗಿದೆ. ಇದಲ್ಲದೆ ಮಳೆಯಿಂದಾಗಿ ರೈತರು ಬೆಳೆದ ಅಡಿಕೆ ತೆಂಗು ಬೆಳೆಗೂ ಸಹ ಹಾನಿ ಉಂಟಾಗಿದೆ. 

ಶಾಸಕರ ಆಪ್ತ ಸಹಾಯಕ ಶ್ರೀನಿವಾಸ್ ಮೂರ್ತಿ ಹಾಗೂ ಮುಖಂಡರ ಭೇಟಿ

ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಡಿಕೆ ಶಿವಕುಮಾರ್ ಅವರ ನೇತೃತ್ವದ ಹೊಸ ಸರ್ಕಾರದ ರಚನೆಯ ಸಂಭ್ರಮದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಅವರ ಆಪ್ತ ಸಹಾಯಕರಾದ ಶ್ರೀನಿವಾಸ್ ಮೂರ್ತಿ ಹಾಗೂ ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸೋಮಶೇಖರ್ ಲ್ಯಾವಿಗೆರೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದರು.rain

ಸೋಮವಾರ ಸುರಿದ ಭಾರಿ ಪ್ರಮಾಣದ ಮಳೆಯಿಂದಾಗಿ ಸಮುದಾಯ ಆರೋಗ್ಯ ಕೇಂದ್ರದ ಕಾಂಪೌಂಡ್ ಕುಸಿದು ಕೆಲ ವಾಹನಗಳಿಗೂ ಸಹ ಉಂಟಾಗಿತ್ತು. ಪರಿಶೀಲನೆ ನಡೆಸಿದ ಆಪ್ತ ಸಹಾಯಕ ಶ್ರೀನಿವಾಸ್ ಮೂರ್ತಿಯವರು ತುರ್ತಾಗಿ ಕಾಂಪೌಂಡ್ ನಿರ್ಮಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ನಂತರ  ಆಚಾಪುರ ಯಡೇಹಳ್ಳಿ, ಖೈರಾ, ಅಂದಾಸುರ ಗ್ರಾಮಗಳಲ್ಲಿ ಮಳೆಯಿಂದಾಗಿ ಮನೆ ಹಾಗೂ ಕೊಟ್ಟಿಗೆ ಮೇಲೆ ಮರ ಬಿದ್ದ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದ ಹಾನಿ ಉಂಟಾಗಿತ್ತು.

ಪರಿಶೀಲನೆ ನಡೆಸಿ ಶಾಸಕರ ಪರವಾಗಿ ವೈಯಕ್ತಿಕ ಧನಸಹಾಯ ನೀಡಿದರು. ಜೊತೆಗೆ ಸ್ಥಳದಲ್ಲೇ ಇದ್ದ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಪರಿಹಾರವನ್ನು ಸಿಗುವಂತೆ ನೋಡಿಕೊಳ್ಳಬೇಕೆಂದು  ಆಗ್ರಹಿಸಿದರು.

ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ ಲ್ಯಾವಿಗೆರೆ ಮಾತನಾಡಿ, ಶಾಸಕರು ಬೆಂಗಳೂರಿನಲ್ಲಿ ಇರುವದರಿಂದ ಅವರ ಸೂಚನೆಯ ಮೇರೆಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಾಗುತ್ತಿದೆ. ಶಾಸಕರು ವೈಯಕ್ತಿಕ ಧನಸಹಾಯ ಹಾಗೂ ಇಲಾಖೆಯ ವತಿಯಿಂದ ಸಿಗುವ ಪರಿಹಾರವನ್ನು ಅರ್ಹ ಫಲಾನುಭವಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಸಹಾಯಕ ಶ್ರೀನಿವಾಸ ಮೂರ್ತಿ, ಸಾಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ,  ಎಪಿಎಂಸಿ ಮಾಜಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರ್ , ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅನಿತಾ ಕುಮಾರಿ ಪ್ರಮುಖರಾದ ಗಜೇಂದ್ರ ಯಾದವ್, ಸಿರಿಜಾನ್, ಆನಂದ ಹರಟೆ, ರಹಮತ್ ಉಲ್ಲಾ, ಖಲಿಮುಲ್ಲಾ ಖಾನ್, ಅಬ್ದುಲ್ ರಜಾಕ್, ರವಿ ಯಡೇಹಳ್ಳಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ

Join WhatsApp

Join Now

Join Telegram

Join Now

Leave a Comment