ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ರಾಜ್ಯದಲ್ಲಿ ತಂಬಾಕು ಗುಟ್ಕಾ, ಪಾನ್ ಮಸಾಲ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ 

On: August 12, 2026 12:52 PM
Follow Us:
---Advertisement---

ರಾಜ್ಯದಲ್ಲಿ ತಂಬಾಕು ಗುಟ್ಕಾ, ಪಾನ್ ಮಸಾಲ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮೇಲೆ ನಿಷೇಧ ಹೇರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವಿಭಾಗವು ಈ ಕುರಿತು ಆದೇಶ ಹೊರಡಿಸಿದ್ದು, ನಿಷೇಧಿತ ಉತ್ಪನ್ನಗಳ ತಯಾರಿಕೆ ಸಂಗ್ರಹಣೆ ಹಾಗೂ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಗುಟ್ಕಾ ಪಾನ್ ಮಸಾಲ ಮತ್ತು ತಂಬಾಕು ನಿಕೋಟಿನ್ ಹೊಂದಿರುವ ಇತರೆ ನಿಷೇಧಿತ ಉತ್ಪನ್ನಗಳ ತಯಾರಿಕೆ ಸಂಗ್ರಹಣೆ ಸಾಗಣೆ ವಿತರಣೆ ಮತ್ತು ಮಾರಾಟದ ವಿರುದ್ಧ ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಮತ್ತು ಜಾರಿ ಕಾರ್ಯಚರಣೆಗಳನ್ನು ನಡೆಸಲಾಗುತ್ತಿದೆ.

ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006 ರ ಸೆಕ್ಷನ್ 30 (2)(ಎ) ಮತ್ತು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ನಿಯಮಗಳು. 2011ರ ನಿಯಮ 2.3.4 ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸುವಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸುವ ಸರ್ಕಾರಿ ಅಧಿಸೂಚನೆಯನ್ನು 10/8/2026 ರಂದು ಹೊರಡಿಸಿದೆ. ಈ ಅಧಿಸೂಚನೆಯೂ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.

ಈ ಅವಧಿಯಲ್ಲಿ ಯಾವುದೇ ಪ್ರದೇಶದಲ್ಲಿ ನಿಷೇಧಿತ ತಂಬಾಕು ಅಥವಾ ನಿಕೋಟಿನ್ ಉತ್ಪನ್ನಗಳ ತಯಾರಿಕೆ ಸಂಗ್ರಹಣೆ ಅಥವಾ ಮಾರಾಟ ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲು ಮತ್ತು ಆರೋಗ್ಯಕರ ಮತ್ತು ವ್ಯಸನ ಮುಕ್ತ ಕರ್ನಾಟಕವನ್ನು ನಿರ್ಮಿಸುವಲ್ಲಿ ತಮ್ಮ ಸಹಕಾರವನ್ನು ವಿಸ್ತರಿಸಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Join WhatsApp

Join Now

Join Telegram

Join Now

Leave a Comment