ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮುರುಘಾಮಠ – ನವೆಂಬರ್ 20ಕ್ಕೆ ಕಂಚಿನ ರಥ ದೀಪೋತ್ಸವ, ಶರಣ ಸಾಹಿತ್ಯ ಹಾಗೂ ಭಾವೈಕ್ಯ ಸಮ್ಮೇಳನ. Bronza chariot deepotsava, sharana literature and bhavaikya sammelana on November 20.

On: November 17, 2025 9:45 AM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದಲ್ಲಿ ನವೆಂಬರ್ 20ರಂದು ಕಂಚಿನ ರಥ ದೀಪೋತ್ಸವ ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನ ನಡೆಯಲಿದೆ ಎಂದು ಮುರುಘಾಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ  ಸ್ವಾಮೀಜಿ ಹೇಳಿದರು.

ಅವರು  ಮುರುಘಾಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ನವೆಂಬರ್ 20 ಬೆಳಗ್ಗೆ 5:30ಕ್ಕೆ ಮುರುಘರಾಜೇಂದ್ರ ಗದ್ದುಗೆಗೆ ವಿಶೇಷ ಶತರುದ್ರಾಭಿಷೇಕ ನಡೆಯಲಿದೆ

ಬೆಳಗ್ಗೆ 10 ಕ್ಕೆ ಶರಣ ಸಾಹಿತ್ಯ ಸಮ್ಮೇಳನ ಹಾಗೂ 597ನೇ ಮಾಸಿಕ ಶಿವಾನುಭವ ಗೋಷ್ಠಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಡಾಕ್ಟರ್ ನಾಗೇಶ್ ಸುವರ್ಣ ಕವಿ ಆಯುರ್ವೇದ ಆಸ್ಪತ್ರೆ, ಯುವ ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಸಮಿತಿ ಹಾಗೂ ಎಸ್.ಜೆ.ಜೆ ಶಿಕ್ಷಣ ಮಹಾವಿದ್ಯಾಲಯ ಸಹಯೋಗದಲ್ಲಿ  ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಮಲ್ಲಿಕಾರ್ಜುನ  ಮುರುಘರಾಜೇಂದ್ರ ಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ಫಲಹಾರೇಶ್ವರ ಸಂಸ್ಥಾನ ಮಠದ ಶಿವಮೂರ್ತಿ ಸ್ವಾಮಿಜಿ ನೆರವೇರಿಸಲಿದ್ದಾರೆ. ಜೊತೆಗೆ ವಿವಿಧ ಭಾಗದ ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಸ್. ನಟರಾಜ್ ನೆರವೇರಿಸಲಿದ್ದಾರೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲ ಸಚಿವರಾದ ಡಾ. ಕೆ.ಸಿ. ಶಶಿಧರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ನಂತರ ಧಾರವಾಡದ ಮಹೇಶ್ ಮಾಶಾಲ್ ಅವರು ‘ವ್ಯಕ್ತಿತ್ವ ವಿಕಸನದ‘ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು ಯುವಕರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಭಾವೈಕ್ಯ ಸಮ್ಮೇಳನ – ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿ.

ಸಂಜೆ 4 ಗಂಟೆಗೆ ಭಾವೈಕ್ಯ ಸಮ್ಮೇಳನ ನಡೆಯಲಿದ್ದು, ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ

ಬೆಂಗಳೂರಿನ ಏರ್ ಆಂಬುಲೆನ್ಸ್  ಶಾಲಿನಿ ನಾಲ್ವಾಡ್ ಅವರಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಭಾವೈಕ್ಯ ಸಮ್ಮೇಳನದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಬಿ.ಕೆ. ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ ಕುಮಾರ್, ಧನಂಜಯ್ ಸರ್ಜಿ, ಬಲ್ಕಿಶ್ ಬಾನು, ಡಿ.ಸಿ. ಸಿ ಬ್ಯಾಂಕ್ ಅಧ್ಯಕ್ಷರಾದ ಮಂಜುನಾಥ್ ಗೌಡ, ಪ್ರಮುಖರಾದ ಎಸ್. ರುದ್ರೇಗೌಡ್ರು, ರಾಮಪ್ಪ, ಜ್ಯೋತಿಪ್ರಕಾಶ್, ವಿದ್ಯಾಧರ, ಆರ್‌.ಸಿ. ಜಗದೀಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಉಡುಪಿಯ ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ ಅವರಿಂದ ವಿಶೇಷ ಉಪನ್ಯಾಸ ನಡೆಯಲಿದೆ. ಸಮಾಜದ ವಿಶೇಷ ವ್ಯಕ್ತಿಗಳಿಗೆ ಸಮಾಜ ಸೇವಾ ಪ್ರಶಸ್ತಿ ಹಾಗೂ ಗುರು ರಕ್ಷೆ ನೀಡಲಾಗುತ್ತಿದೆ.

ರಾತ್ರಿ 8.30 ಕ್ಕೆ ಕಂಚಿನ ದೀಪ ರಥೋತ್ಸವ ಹಾಗೂ ಹೂವಿನ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಲಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ದೀಪೋತ್ಸವ ಸಮಿತಿಯ ಅಧ್ಯಕ್ಷರಾದ ವಿಜಯ್ ಕುಮಾರ್ ಬಿ .ಆಚಾಪುರ, ರಾಜೇಂದ್ರ ಮಲಂದೂರು, ಮಧುಸೂದನ, ದೇವೇಂದ್ರಗೌಡ್ರು, ಸೋಮಶೇಖರ್, ರಾಜೇಂದ್ರ , ಮುರುಗೇಶಪ್ಪಗೌಡ್ರು, ಶಿವಕುಮಾರ್, ಯೋಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

 

 

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment