ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಖ್ಯಾತ ಗಾಯಕಿ ಎಸ್. ಜಾನಕಿ ನಿಧನ.

On: July 11, 2026 3:23 PM
Follow Us:
---Advertisement---

ಮೈಸೂರು : ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್ ಜಾನಕಿ (88) ಅವರು ಶನಿವಾರ ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕಳೆದ ಕೆಲವು ದಿನಗಳಿಂದ ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ.

ಚಿತ್ರರಂಗದಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಿಂದಿ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಹಿರಿಮೆ ಅವರದು.

ಜಾನಕಿಯವರು 23 ಏಪ್ರಿಲ್ 1938 ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದರು. ಇವರಿಗೆ ಜಾನಕಿಯಮ್ಮ, ಗಾನಕೋಕಿಲ, ಗಾನ ಕೋಗಿಲೆ, ನೈಟಿಂಗೇಲ್ ಆಫ್ ಇಂಡಿಯಾ ಇನ್ನಿತರ ಹೆಸರುಗಳಿಂದ ಕರೆಯುತ್ತಿದ್ದರು. ಜಾನಕಿ ಅವರು ತಮ್ಮ 19ನೇ ವಯಸ್ಸಿನಲ್ಲಿ ಗಾಯನ ವೃತ್ತಿ ಜೀವನವನ್ನು ಪ್ರಾರಂಭಿಸಿದರು.

ಜಾನಕಿ ಅವರಿಗೆ ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 33 ವಿವಿಧ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅವರು ಜುಲೈ 11 2026 ರಂದು  ಮೈಸೂರಿನಲ್ಲಿ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

Join WhatsApp

Join Now

Join Telegram

Join Now

Leave a Comment