ಸಾಗರ : ದೆಹಲಿಯ ಶಿಕ್ಷಣ ಮಂತ್ರಾಲಯ ಇವರಿಂದ ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅದರಂತೆ 2025 26 ನೇ ಸಾಲಿನ ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಗೆ ನೀಡಿ ಗೌರವಿಸುವ ಉದ್ದೇಶದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶಾಲೆಗಳಲ್ಲಿ ಶೈಕ್ಷಣಿಕವಾಗಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವ ಶಿಕ್ಷಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸಾಗರ ತಾಲೂಕಿನಲ್ಲಿ ಸಾಧನೆ ಮಾಡಿರುವ ಪಟ್ಟಿಗೆ ಸೇರುವ ಅನೇಕ ಶಿಕ್ಷಕರಿದ್ದಾರೆ. ಅವರು https://nationalawardstoteachers.education.gov.in ಈ ವೆಬ್ ಪೋರ್ಟಲ್ ಮೂಲಕ ನೊಂದಣಿ ಮಾಡಿಸಿಕೊಂಡು ನಂತರ ಪೂರಕ ಮಾಹಿತಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನವಾಗಿದ್ದು ಶಿಕ್ಷಕರು ಈ ಬಗ್ಗೆ ವಿಶೇಷವಾದ ಗಮನ ಹರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಈ ಪರಶುರಾಮಪ್ಪ ಕೋರಿದ್ದಾರೆ.