ಸಾಗರ : ತಾಲ್ಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 4/7/2025 ರ ಶುಕ್ರವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಸದರಿ ರಜೆ ದಿನದಂದು ನಡೆಯಬೇಕಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶ ಹೊರಡಿಸಿದ್ದಾರೆ.