ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಭೀಕರ ಅಪಘಾತ – 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ Terrible accident – more than 25 passengers injured

On: July 24, 2025 3:20 PM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ಮುಂಬಾಳು ಗ್ರಾಮದ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಹಾಗೂ ಗೂಡ್ಸ್ ಕಂಟ್ಏನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.accident 2

ಬಸ್ ಚಾಲಕ ಸೇರಿದಂತೆ ಕೆಲವರಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದೆ. ಗಾಯಾಳುಗಳಿಗೆ ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕಳುಹಿಸಲಾಗಿದೆ

ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಆನಂದಪುರದಿಂದ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಗೂಡ್ಸ್ ಲಾರಿ  ನಡುವೆ  ಮುಖಾಮುಖಿ ಡಿಕ್ಕಿಯಾಗಿದೆ.bus and lorry

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಹುತೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೆಎಸ್ಆರ್ ಸಿ ಬಸ್ಸಿನಲ್ಲಿ ಸಾಗರದಿಂದ ಶಿವಮೊಗ್ಗ ಕಾಲೇಜಿಗೆ ತೆರಳುತ್ತಿದ್ದ  ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಎಲ್ಲರೂ ಗಾಯಗೊಂಡಿದ್ದಾರೆ.

ಈ ಅಪಘಾತದಿಂದ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು,  ನಂತರ ಆನಂದಪುರ ಠಾಣೆ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು ಸ್ಥಳೀಯರ ಸಹಾಯ

ಅಪಘಾತವಾದ ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ತಕ್ಷಣ ಧಾವಿಸಿದ್ದಾರೆ. ಪ್ರಮುಖವಾಗಿ ಸಾಗರದ ಮರ್ಕಜ್ ಶಾಲೆಗೆ ಸೇರಿದ ಬಸ್ಸಿನಲ್ಲಿಯೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಸುದ್ದಿಯ ವಿಡಿಯೋ ಇಲ್ಲಿದೆ

Join WhatsApp

Join Now

Join Telegram

Join Now

Leave a Comment