ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಆಚಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಐದೃಷ್ಟಿ ಕಣ್ಣಿನ ಆಸ್ಪತ್ರೆ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ 

On: September 7, 2026 7:53 AM
Follow Us:
---Advertisement---

ಸೆ. 10 ರಂದು ಆಚಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಉಚಿತ ಕಣ್ಣಿನ ತಪಾಸಣೆ

ಸಾಗರ : ತಾಲೂಕಿನ ಆನಂದಪುರ ಸಮೀಪದ ಆಚಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ. 10 ರಂದು ಸಂಘದ ಆವರಣದಲ್ಲಿ ನಡೆಯಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷರಾದ ಕೆ. ಆರ್. ರಾಜು ಹೇಳಿದರು.

ಅವರು ಆಚಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆಪ್ಟೆಂಬರ್ 10 ರಂದು ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಮುರುಘಾಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಗೋಪಾಲಕೃಷ್ಣ ಬೇಳೂರು ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷರಾದ ಕೆ ಆರ್ ರಾಜು ವಹಿಸಲಿದ್ದಾರೆ ಎಂದು ಹೇಳಿದರು.

ಉಚಿತ ಕಣ್ಣಿನ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ 

ಆಚಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸದಸ್ಯರ ಹಾಗೂ ಆನಂದಪುರ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಅನುಕೂಲವಾಗಬೇಕು ಎನ್ನುವ ದೃಷ್ಟಿಯಿಂದ ಐದೃಷ್ಟಿ ಕಣ್ಣಿನ ಆಸ್ಪತ್ರೆ ಹಾಗೂ ಆಚಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಮಾಡಲಾಗುವುದು. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿನಂತಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಸಂಘದ ಉಪಾಧ್ಯಕ್ಷರಾದ ಟಾಕಪ್ಪ.ಡಿ, ನಿರ್ದೇಶಕರಾದ ಮೊಹಮ್ಮದ್ ಹುಸೇನ್, ಮಂಜಪ್ಪ ಜಂಬಳ್ಳಿ, ಎಸ್. ಆರ್. ಪ್ರವೀಣ್ ಕುಮಾರ್, ಮಂಜಪ್ಪ, ಗಂಗಾಧರಪ್ಪ ಬಿ .ಹೆಚ್ ಹಾಗೂ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಭಾಗ್ಯ ಉಪಸ್ಥಿತರಿದ್ದರು.

ಆಚಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಪ್ರಸ್ತುತ ಸಿಗುವ ಸೌಲಭ್ಯಗಳು ಹಾಗೂ ಸಂಘದ ಮುಂದಿನ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಕೆಳಗಿನ ವಿಡಿಯೋ ನೋಡಿ.

 

Join WhatsApp

Join Now

Join Telegram

Join Now

Leave a Comment