ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಪ್ರಜಾ ಸೇವೆ ಆಂದೋಲನ – ಸ್ಥಳದಲ್ಲಿ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು 

On: October 17, 2026 12:09 PM
Follow Us:
---Advertisement---

ಪ್ರಜಾ ಸೇವೆ ಆಂದೋಲನ – ಸ್ಥಳದಲ್ಲಿ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

ಆನಂದಪುರ : ಸಾರ್ವಜನಿಕರಿಗೆ ಕಚೇರಿಗಳಿಗೆ ಆಲೆದಾಟ ತಪ್ಪಿಸುವ ಉದ್ದೇಶದಿಂದ ಪ್ರಜಾ ಸೇವೆ ಆಂದೋಲನವನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಅವರು ಆನಂದಪುರದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರಿ ಸೇವೆಗಳನ್ನ ಹಾಗೂ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾ ಸೇವೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವಂತಾಗಬಾರದು. ಹಲವು ಸಮಯದಲ್ಲಿ ಅಧಿಕಾರಿಗಳು ಕಚೇರಿಗಳಲ್ಲಿ ಇರುವುದಿಲ್ಲ. ಆದ್ದರಿಂದ ಸರ್ಕಾರವೇ ಜನರ ಮನೆ ಬಾಗಿಲಿಗೆ ಹೋಗಿ ಅವರ ಸಮಸ್ಯೆಗಳನ್ನು ಕೇಳಿ, ಅಲ್ಲಿಯೇ ಆದ್ಯತೆ ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಜಾ ಸೇವೆ ಆಂದೋಲನದಲ್ಲಿ ಪಡೆದಂತ ಅರ್ಜಿಗಳನ್ನ ಉಪವಿಭಾಗಾಧಿಕಾರಿ , ತಹಶೀಲ್ದಾರ್ ಮುಂದೆ ಆಗಬೇಕಾದ ಕೆಲಸಗಳನ್ನ ನಿರ್ವಹಿಸಬೇಕು. ಹೋಬಳಿ ಮಟ್ಟದಲ್ಲಿ ನಡೆದಂತ ಇಂತಹ ಕಾರ್ಯಕ್ರಮಗಳು ಯಶಸ್ವಿ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇತಿಹಾಸದಲ್ಲಿ ಮೊದಲ ಬಾರಿಗೆ ಮಲೆನಾಡು ಭಾಗವಾದ ಸಾಗರದಲ್ಲಿ ಬರ ಘೋಷಣೆಯಾಗುವಂತ ಪರಿಸ್ಥಿತಿ ಬಂದಿರುವುದು ಬೇಸರದ ಸಂಗತಿಯಾಗಿದೆ. ಹಿಂದೆ ಈ ನಿಟ್ಟಿನಲ್ಲಿ ಸರ್ಕಾರ ನೀಡುವಂತ ಬಗುರುಹುಕುಂ ಜಮೀನಿನಲ್ಲಿ 20 ಗುಂಟೆ ಜಮೀನಿನಲ್ಲಿ ಅರಣ್ಯ ಬೆಳೆಸಬೇಕು ಎಂದು ಸರ್ಕಾರದ ಗಮನ ಸೆಳೆಯಲಾಗಿತ್ತು. ಆದರೆ ಬಂದಂತ ಯಾವುದೇ ಸರ್ಕಾರಗಳು ಗಮನ ಹರಿಸದೆ ಇರುವುದರಿಂದ ಬರಗಾಲದ ಪರಿಸ್ಥಿತಿ ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಸ್ತೂರಿ ರಂಗನ್ ವರದಿ, ಅರಣ್ಯ ಕಾಯ್ದೆಗಳು ರೈತರಿಗೆ ಸಮಸ್ಯೆಯನ್ನು ತಂದು ಒಡ್ಡಿದೆ. ರೈತರ ಸಮಸ್ಯೆಗಳಿಗೆ ಬಗೆಹರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯ ಪ್ರವೃತ್ತರಾಗಬೇಕು. ಈ ಸರ್ಕಾರವು ಜನರಿಂದ ಜನರ ಸೇವೆಗಾಗಿ ಇರುವ ಸರ್ಕಾರವಾಗಿದ್ದು, ಪ್ರಯೋಜನಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರಜಾ ಸೇವೆ ಆಂದೋಲನದಲ್ಲಿ 450 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಹಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗಿದೆ. ಇನ್ನು ಹಲವು ಅರ್ಜಿಗಳಿಗೆ ಶೀಘ್ರ ಪರಿಹಾರ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ರೀಷಿ ಆನಂದ್, ಉಪ ಪೊಲೀಸ್ ಅಧೀಕ್ಷಕ ಬೆನಕ ಪ್ರಸಾದ್, ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ಪ್ರತಿಭಾ .ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಮೌನೇಶ್, ಪ್ರಮುಖ ಅಧಿಕಾರಿಗಳಾದ ಸಂದೀಪ್, ನಂದಿನಿ, ಸಂತೋಷ್ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಅ. 17ರಂದು ಆನಂದಪುರದಲ್ಲಿ ಪ್ರಜಾ ಸೇವೆ ಆಂದೋಲನ 

ಅಕ್ಕ ಕ್ಯಾಂಟೀನ್ 15 ಲಕ್ಷದಲ್ಲಿ ನಿರ್ಮಾಣ ಮಾಡಲು ಆಗದಿದ್ದರೆ ದೇಣಿಗೆ ಎತ್ತಿ ಕಟ್ಟುತ್ತೇವೆ – ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ್ ಹೊನಗೋಡು

ಅನುಪಯುಕ್ತ ಕಟ್ಟಡದಲ್ಲಿ ಅಕ್ಕ ಕ್ಯಾಂಟೀನ್ ತೆರೆಯಲು ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಮುಖಂಡರು 

ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ವಸತಿ ಗೃಹದಲ್ಲಿ ಅಕ್ಕ ಕ್ಯಾಂಟೀನ್ ವಿರೋಧಿಸಿ ಅಹೋರಾತ್ರಿ ಧರಣಿ

ಭವಿಷ್ಯದ ಹಿತದೃಷ್ಟಿಯಿಂದ ಅರಣ್ಯ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು – ಕುಲಪತಿ ಡಾ. ಎಂ ವಿ ಧನಂಜಯ್

ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ : ಮುಖ್ಯಮಂತ್ರಿಗೆ ಯುವಕನ ವಿಶೇಷ ಪತ್ರ 

Leave a Comment