ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಕ್ಯಾಲೆಂಡರ್ ಬಿಡುಗಡೆ – Calendar released for the Kadlehanklu Marikamba Devi festival

On: January 7, 2026 11:18 AM
Follow Us:
---Advertisement---

ಸಾಗರ : ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಮಾ. 10 ರಿಂದ ಮಾರ್ಚ್ 16 ರವರೆಗೆ ನಡೆಯಲಿದೆ.

ಜಾತ್ರಾ ಮಹೋತ್ಸವದ ಅಂಗವಾಗಿ ಸಮಿತಿಯ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಲಾಯಿತು.Calendar

ಜಾತ್ರಾ ಸಮಿತಿಯ ಅಧ್ಯಕ್ಷ ವೆಂಕಟೇಶ್ ಹಾಗೂ ಆನಂದಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗುರುರಾಜ್  ಮಾತನಾಡಿ, ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರೆಯು ಅದ್ದೂರಿಯಾಗಿ ನಡೆಯಲಿದ್ದು, ಭಕ್ತರು ತನು, ಮನ, ಧನ ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.

ಮಾರಿಕಾಂಬಾ ದೇವಿಯ ತವರು ಮನೆಯ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯ ಸಹ ಭರದಿಂದ ಸಾಗಿದ್ದು, ಹೆಚ್ಚಿನ ಸಹಕಾರ ನೀಡಬೇಕು ಎಂದು ಕೋರಿದರು.

ಹರಾಜು ಪ್ರಕ್ರಿಯೆಗೆ ಆಹ್ವಾನ

ಮಾ.10 ರಿಂದ ಆರಂಭವಾಗುವ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಜನವರಿ 12ರಂದು ಜಾತ್ರಾ ಸಮಿತಿ ವತಿಯಿಂದ ಹರಾಜು ಪ್ರಕ್ರಿಯೆಗೆ ಜರುಗಲಿದೆ ಎಂದು ಜಾತ್ರಾ ಸಮಿತಿಯ ಸದಸ್ಯ ರವಿಕುಮಾರ್ ಯಡೇಹಳ್ಳಿ ಕರೆ ನೀಡಿದರು.

ದೀಪಾಲಂಕಾರ, ಅಂಗಡಿ ಮಳಿಗೆಗಳು ಡೆಕೋರೇಷನ್,  ಅಮ್ಯೂಸ್ಮೆಂಟ್ ಸೇರಿದಂತೆ ವಿವಿಧ ಹರಾಜುಗಳಿಗೆ ಜನವರಿ 12ರಂದು ಭಾಗವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಜಯಪ್ಪ ಗೌಡ್ರು, ವೇಣಾಕ್ಷ, ನಾರಿ ಲೋಕಪ್ಪ, ರಾಜು ದೇವಾಡಿಗ, ಗೌರವಾಧ್ಯಕ್ಷ ರಾಜೇಂದ್ರ ಗೌಡ್ರು ಹಾಗೂ ಜಾತ್ರಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment