ಸಾಗರ – ಮನೆಯ ಹೊರಗೆ ಒಣಗಿಸಿದ ಸೀರೆಯನ್ನು ಕಳ್ಳನೊಬ್ಬ ಕದ್ದು ಪರಾರಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳ ಸೀರೆಯನ್ನು ಕದ್ದು ಪರಾರಿಯಾಗಿದ್ದಾನೆ. ಆನಂದಪುರದಲ್ಲಿ ಕಡ್ಲೆಹಂಕ್ಲು ಮಾರಿಕಾಂಬಾ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಜಾತ್ರೆಯ ಮೊದಲನೆ ದಿನ ಅಮ್ಮನವರ ರಾಜಬೀದಿ ಉತ್ಸವ ಅದ್ದೂರಿಯಾಗಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಮನೆಯವರೆಲ್ಲ ಅಮ್ಮನವರ ದರ್ಶನಕ್ಕೆ ಹೋಗಿದ್ದರು.
ಈ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಮನೆಯ ಹೊರಗೆ ಒಣಗಿಸಿದ ಸೀರೆಯನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳರು ಕೇವಲ ಸೀರೆಯನ್ನು ಮಾತ್ರ ಕದಿಯಲು ಬಂದಿದ್ದಾರೋ ಎಂಬುದು ಪೊಲೀಸ್ ತನಿಖೆಯಿಂದ ಹೊರ ಬರಬೇಕಾಗಿದೆ.
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ.





