ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ – ಹಲವರಿಗೆ ಗಾಯ. Fire breaks out in private bus going from shivamogga to Bengaluru – several injured.

On: January 28, 2026 6:08 AM
Follow Us:
---Advertisement---

ಶಿವಮೊಗ್ಗ: ಖಾಸಗಿ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಮಾರ್ಗ ಮಧ್ಯೆಯೇ ಸಂಪೂರ್ಣ ಸುಟ್ಟು ಹೋದ ಘಟನೆ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಬಳಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮೂವರು ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ.

 ಹೊಸನಗರ ತಾಲ್ಲೂಕಿನ ನಿಟ್ಟೂರಿನಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ ಬಸ್ ಇದಾಗಿದ್ದು, ಬಸ್‌ನಲ್ಲಿ 40 ಮಂದಿ ಪ್ರಯಾಣಿಕರು ಇದ್ದರು.

 ಬೆಂಗಳೂರಿನ ಅನ್ನಪೂರ್ಣ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಸ್ವೀಪರ್ ಬಸ್, ರಾತ್ರಿ ನಿಟ್ಟೂರಿನಿಂದ ಹೊರಟು ನಗರ, ಹೊಸನಗರ, ರಿಪ್ಪನ್ ಪೇಟೆ ಮೂಲಕ ಶಿವಮೊಗ್ಗದತ್ತ ಬರುವಾಗ ಅರಸಾಳು-ಸೂಡೂರು ಬಳಿಯ ಒಂಬತ್ತನೇ ಮೈಲಿಗಲ್ಲು ಕಾಡಿನ ಮಧ್ಯೆ ಬೆಂಕಿ ಕಾಣಿಸಿಕೊಂಡಿದೆ.

 ಆರಂಭದಲ್ಲಿ ಬಸ್‌ನಲ್ಲಿ ತಾಂತ್ರಿಕ ದೋಷದಿಂದ ಹೊಗೆ ಕಾಣಿಸಿಕೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ನಂತರ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ. ಹೀಗಾಗಿ ದೊಡ್ಡ ಅವಘಡ ತಪ್ಪಿದೆ ಎಂದು ತಿಳಿದುಬಂದಿದೆ.

 ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾರಿಗೂ ಜೀವಪಾಯವಾಗಿಲ್ಲ.ರಿಪ್ಪನ್ ಪೇಟೆ ಠಾಣೆ ಪೊಲೀಸರು ಹಾಗೂ ಸ್ಥಳೀಯರು ಬಸ್‌ನಲ್ಲಿದ್ದವರಿಗೆ ನೆರವಾಗಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು.ರಿಪ್ಪನ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment