ಸಾಗರ : ತಾಲ್ಲೂಕಿನ ಮಳ್ಳ ಗ್ರಾಮದಲ್ಲಿ ಅಕ್ರಮವಾಗಿ ಗೋ ಸಾಗಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಪ್ರವೀಣ್ ಅವರ ಆದೇಶದಂತೆ ಪೊಲೀಸ್ ಸಿಬ್ಬಂದಿ ನಿರಂಜನ್ ಅವರು ಡಿ. 8 ರ ಬೆಳಗ್ಗೆ ಮಳ್ಳ ಗ್ರಾಮದ ದೇವಸ್ಥಾನದ ಬಳಿ ಹೋದಾಗ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಟಾಟಾ ಏಸ್ ವಾಹನ ಕಂಡು ಬಂದಿದೆ. ಪರಿಶೀಲನೆ ನಡೆಸಿದಾಗ ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೆ ಎರಡು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.
ಅಕ್ರಮವಾಗಿ ಜಾನುವಾರಗಳನ್ನು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಲ್ಯಾವಿಗೆರೆ ಹಾಗೂ ಗುತ್ತನಹಳ್ಳಿ ಗ್ರಾಮದ ಇಬ್ಬರ ವಿರುದ್ಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





