ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಸಾಂಸ್ಕೃತಿಕ ಮನಸ್ಸುಗಳಿಂದ ಉತ್ತಮ ಸಮಾಜ ನಿರ್ಮಾಣ – ಮಾಜಿ ಸಚಿವ ಕಾಗೋಡು ತಿಮ್ಮಪ್ಪ. Building a better society through cultural minds – Former minister kagodu thimmappa.

On: November 19, 2025 11:48 AM
Follow Us:
---Advertisement---

ಸಾಗರ- ಸಾಂಸ್ಕೃತಿಕ ಮನಸ್ಸುಗಳಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ಅವರು ಇಲ್ಲಿನ ಜನತಾ ಬಾಲವಿಕಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯವರು ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಮೌಲಿಕ ಶಿಕ್ಷಣವನ್ನು ನೀಡುವುದರ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾರ್ಗದರ್ಶನವನ್ನು ನೀಡಬೇಕು. ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳ ಅಭಿರುಚಿಯನ್ನು ಬೆಳೆಸಬೇಕು. ಬರಿ ಅಂಕಗಳಿಗೆ ಸೀಮಿತವಾಗಿರಸದೆ ಸೃಜನಶೀಲತೆಯನ್ನು ಬೆಳೆಸಬೇಕು. ಮುಗ್ದವಾದ ಮಕ್ಕಳ ಮನಸ್ಸಿನಲ್ಲಿ ಉತ್ತಮವಾದ ಚಿಂತನೆಗಳನ್ನು ಬೆಳೆಸಬೇಕಾಗಿದೆ ಎಂದು ಹೇಳಿದರು.

kagodu thimmappa sagara

ಜನತಾ ಎಜುಕೇಷನ್ ಸೋಸೈಟಿಯ ಅಧ್ಯಕ್ಷರಾದ ಡಾ.ರಾಜನಂದಿನಿ ಕಾಗೋಡು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡಿದಲ್ಲಿ ಮಾತ್ರ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ. ಶಾಲಾ ಹಂತದಲ್ಲಿಯೇ ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವಲ್ಲಿ ಶಿಕ್ಷಕರು ಶ್ರಮ ವಹಿಸಬೇಕಾಗಿದೆ.ಪೋಷಕರು ಸಹ ಮಕ್ಕಳ ಭವಿಷ್ಯವನ್ನು ರೂಪಿಸಲು ಉತ್ತಮವಾದ ಕಲಿಕಾ ಪರಿಸರವನ್ನು ನಿರ್ಮಾಣ ಮಾಡಬೇಕು, ಮಕ್ಕಳಲ್ಲಿ ಶಿಸ್ತು, ಸಂಯಮ, ಪರಿಶ್ರಮದಂತಹ ಉತ್ತಮವಾದ ನಡವಳಿಕೆಗಳನ್ನು ರೂಡಿಸಿಕೊಳ್ಳುವಂತೆ ಮಾಡಬೇಕಾಗಿದೆ ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಮಾತನಾಡಿ, ಮಕ್ಕಳ ಪ್ರತಿಭೆಗೆ ಪ್ರತಿಭಾ ಕಾರಂಜಿ ಉತ್ತಮವಾದ ವೇದಿಕೆಯಾಗಿದೆ. ಇಂತಹ ಸಂದರ್ಭವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವಂತಾಗಬೇಕು. ಇಂತಹ ಪೂರಕ ಚಟುವಟಿಕೆಗಳಿಂದ ಮಕ್ಕಳ ಮನಸ್ಸನ್ನು ಉಲ್ಲಾಸವಾಗಿಸುತ್ತದೆ ಹಾಗೂ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಹೆಚ್ಚು ಪ್ರೇರಣೆಯಾಗಲಿದೆ. ಶಿಕ್ಷಣ ಇಲಾಖೆಯು ಉತ್ತಮ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಅಭಿನಂದನಿಯವಾಗಿದೆ. ಇಲಾಖೆಗೆ ಪೂರಕವಾಗಿ ಶಿಕ್ಷಣ ಸಂಸ್ಥೆಗಳು ಸಹಕಾರ ನೀಡುತ್ತಿರುವುದು ಶ್ಲಾಘನಿಯವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಹೊಳೆಯಪ್ಪ, ಸದಸ್ಯರಾದ ಪರಶುರಾಮಪ್ಪ, ಡಾ.ಕಾರಿಯಪ್ಪ, ಎಂ.ಜಿ.ಎನ್.ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ವಾನಜಾಕ್ಷಿ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಡಾ.ಅನ್ನಪೂರ್ಣ, ಸಹಾಯಕ ನಿರ್ದೇಶಕ ಭೂಮೇಶ್, ಟಿಪಿಇಓ ರಮೇಶ್, ಶಿಕ್ಷಣ ಸಂಯೋಜಕ ಪಾಲಾಕ್ಷಪ್ಪ, ಸಿ.ಆರ್.ಪಿ ಹನುಮಂತಪ್ಪ, ಶಿಕ್ಷಕರ ಸಂಘದ ಪ್ರತಿನಿಧಿಗಳಾದ ಜಗನ್ನಾಥ ಕೆ,ನೌಕರರ ಸಂಘದ ಮಂಜುನಾಥ, ಶಿಕ್ಷಕರ ಸಹಕಾರ ಸಂಘದ ಅಧ್ಯಕ್ಷ ಚಂದ್ರಪ್ಪ, ಪದವಿಧರ ಶಿಕ್ಷಕರ ಸಂಘದ ಅಧ್ಯಕ್ಷ ಕವಿರಾಜ್, ಜನತಾ ಶಾಲೆಯ ಮುಖ್ಯ ಶಿಕ್ಷಕಿ ಕಮಲಾಕ್ಷಿ ನಾಯ್ಕ್, ಜ್ಯೋತಿ ಎಸ್, ಚೂಡಾಮಣಿ, ಜ್ಯೋತಿ ಕೆ.ಹೆಚ್ ಮೊದಲಾದವರು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now

Leave a Comment