ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ಮಲಂದೂರು ಗ್ರಾಮದಲ್ಲಿ ಇತ್ತೀಚೆಗೆ 10 ನೇ ತರಗತಿಯ ವಿದ್ಯಾರ್ಥಿ ಐಶ್ವರ್ಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಳು.
ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಅವರ ಮನೆಗೆ ಭೇಟಿ ನೀಡಿ ಮಗಳನ್ನು ಕಳೆದುಕೊಂಡ ತಾಯಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಜೊತೆಗೆ ವೈಯಕ್ತಿಕ ಧನ ಸಹಾಯ ಮಾಡಿ , ಇರುವ ಗೂಡಂಗಡಿಯಲ್ಲಿ ಉತ್ತಮವಾಗಿ ವ್ಯಾಪಾರ ಮಾಡುವ ಮೂಲಕ ಜೀವನ ಸಾಗಿಸುವಂತೆ ಸಲಹೆ ನೀಡಿದರು.
ಮಗನಿಗೆ ಉತ್ತಮ ಶಿಕ್ಷಣ ನೀಡಬೇಕು. ಯಾವುದೇ ಕಾರಣಕ್ಕೂ ಶಾಲೆಯಿಂದ ಬಿಡಿಸಬಾರದು. ಮುಂದಿನ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಲ್ಲಿ ನಮ್ಮನ್ನು ಸಂಪರ್ಕಿಸಿ ವಿದ್ಯಾಭ್ಯಾಸಕ್ಕೆ ಬೇಕಾದ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಮೂಢನಂಬಿಕೆಗಳಿಗೆ ಮೊರೆ ಹೋಗಬೇಡಿ
ಅತಿಯಾಗಿ ಮೂಡ ನಂಬಿಕೆಗಳನ್ನು ನಂಬಿದೆ, ಅನಾರೋಗ್ಯ ಉಂಟಾದ ಸಂದರ್ಭದಲ್ಲಿ ವೈದ್ಯರನ್ನು ಸಂಪರ್ಕಿಸಬೇಕೇ ಹೊರತು ಮೂಢ ನಂಬಿಕೆಗಳ ದಾಸರಾಗಬೇಡಿ ಎಂದು ಸಲಹೆ ನೀಡಿದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇👇