ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ : ಮುಖ್ಯಮಂತ್ರಿಗೆ ಯುವಕನ ವಿಶೇಷ ಪತ್ರ 

On: October 2, 2026 9:28 AM
Follow Us:
---Advertisement---

ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ : ಮುಖ್ಯಮಂತ್ರಿಗೆ ಯುವಕನ ವಿಶೇಷ ಪತ್ರ

ಶಿವಮೊಗ್ಗ : ಖಾಸಗಿ ಶಾಲೆಗಳ ಅಬ್ಬರದಿಂದ ನಲುಗಿರುವ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಹೊಸನಗರ ತಾಲೂಕಿನ ಯುವಕನೊಬ್ಬ ಮುಖ್ಯಮಂತ್ರಿಗೆ ಒಂದು ವಿಶೇಷ ಪತ್ರವನ್ನು ಬರೆದು ಮನವಿ ಮಾಡಿದ್ದಾರೆ.

ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುತ್ತಿರುವ ಪೋಷಕರ ಬಿಪಿಎಲ್ ಕಾಡುಗಳನ್ನು ರದ್ದುಗೊಳಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಪತ್ರ ಬರೆದಿದ್ದಾರೆ.

ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಚಿಕ್ಕ ಮಣತಿ ನಿವಾಸಿ ರೋಹಿತ್. ಸಿ ಎಂಬ ಯುವಕ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ರಾಜ್ಯದ ಗಮನ ಸೆಳೆದಿದ್ದಾರೆ.

ಸರ್ಕಾರಿ ಶಾಲೆಗಳನ್ನು ಸಂರಕ್ಷಿಸುವುದು ಸರ್ಕಾರದ ಮುಖ್ಯ ಕರ್ತವ್ಯವಾಗಿರುತ್ತದೆ. ಏಕೆಂದರೆ ಇತ್ತೀಚಿನ ದಿನಮಾನ ಕಾಲದಲ್ಲಿ ಪೋಷಕರು ಆಂಗ್ಲ ಮಾಧ್ಯಮದ ಹುಚ್ಚಾಸೆಯಿಂದ ಲಕ್ಷಾಂತರ ರೂ ಗಳನ್ನು ವೆಚ್ಚ ಮಾಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಲಕ್ಷಾಂತರ ಹಣವನ್ನು ಖರ್ಚು ಮಾಡಿ ಖಾಸಗಿ ಶಾಲೆಗಳಿಗೆ ಸೇರಿಸುವಂತಹ ಪೋಷಕರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಇಲ್ಲವೇ ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸುವಂತೆ ಆದೇಶ ಮಾಡಿಸಿದಾಗ ಸರ್ಕಾರ ಶಾಲೆಗಳನ್ನು ಸಂರಕ್ಷಣೆ ಮಾಡಿದಂತಾಗುತ್ತದೆ.

ಈ ಹಿನ್ನಲೆಯಲ್ಲಿ ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿಯದೆ ಸರ್ಕಾರ ಮೇಲ್ಕಾಣಿಸಿದ ಅತಿ ಸೂಕ್ಷ್ಮ ಅಂಶಗಳನ್ನು ಪರಿಗಣಿಸುವುದರ ಜೊತೆಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಜೊತೆಗೆ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಶಿಫಾರಸು ಮಾಡಿ ಸರ್ಕಾರಿ ಶಾಲೆಗಳಲ್ಲೂ ಉತ್ತಮ ಶಿಕ್ಷಣ ಸಿಗುವಂತೆ ವ್ಯವಸ್ಥೆ ಮಾಡಬೇಕು. ಈ ಮೂಲಕ ಸರ್ಕಾರಿ ಶಾಲೆಗಳನ್ನು ಸಂರಕ್ಷಿಸಬೇಕು ಎಂದು ತಮ್ಮ ಪತ್ರದಲ್ಲಿ ವಿನಂತಿ ಮಾಡಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಪ್ರಜಾ ಸೇವೆ ಆಂದೋಲನ – ಸ್ಥಳದಲ್ಲಿ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು 

ಅ. 17ರಂದು ಆನಂದಪುರದಲ್ಲಿ ಪ್ರಜಾ ಸೇವೆ ಆಂದೋಲನ 

ಅಕ್ಕ ಕ್ಯಾಂಟೀನ್ 15 ಲಕ್ಷದಲ್ಲಿ ನಿರ್ಮಾಣ ಮಾಡಲು ಆಗದಿದ್ದರೆ ದೇಣಿಗೆ ಎತ್ತಿ ಕಟ್ಟುತ್ತೇವೆ – ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ್ ಹೊನಗೋಡು

ಅನುಪಯುಕ್ತ ಕಟ್ಟಡದಲ್ಲಿ ಅಕ್ಕ ಕ್ಯಾಂಟೀನ್ ತೆರೆಯಲು ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಮುಖಂಡರು 

ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ವಸತಿ ಗೃಹದಲ್ಲಿ ಅಕ್ಕ ಕ್ಯಾಂಟೀನ್ ವಿರೋಧಿಸಿ ಅಹೋರಾತ್ರಿ ಧರಣಿ

ಭವಿಷ್ಯದ ಹಿತದೃಷ್ಟಿಯಿಂದ ಅರಣ್ಯ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು – ಕುಲಪತಿ ಡಾ. ಎಂ ವಿ ಧನಂಜಯ್

Leave a Comment