ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ – ಆರೋಪಿಗಳ ಬಂಧನ. Fatal attack following complaint against illegal sand transportation – Arrest of accused.

On: January 16, 2026 2:00 PM
Follow Us:
---Advertisement---

ಸಾಗರ : ಅಕ್ರಮ ಮರಳು ಸಾಗಾಣಿಕೆ ಬಗ್ಗೆ 112 ಗೆ ದೂರು ನೀಡಿದ ಹಿನ್ನೆಲೆಯಲ್ಲಿ ದೂರು ನೀಡಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೊಸನಗರ ತಾಲ್ಲೂಕಿನ ಚಂದಳ್ಳಿ ಗ್ರಾಮದ ವಕೀಲರಾದ ಶರತ್ ಕುಮಾರ್ ಅವರು ಅಕ್ರಮ ಮರಳು ಸಾಗಾಣಿಕೆ ಬಗ್ಗೆ 112 ಗೆ ದೂರು ನೀಡಿದ್ದರು. ಪೊಲೀಸರಿಗೆ ದೂರು ನೀಡಿದ್ದಾರೆ ಎಂಬ ಕಾರಣಕ್ಕಾಗಿ ಜ.15 ರಾತ್ರಿ 12.30 ಕ್ಕೆ ಕೊಲೆ ಮಾಡುವ ಉದ್ದೇಶದಿಂದ ಎರಡು ಕಾರು ಹಾಗೂ 2 ಬೈಕುಗಳಲ್ಲಿ ದೂರುದಾರರನ್ನು ಹಿಂಬಾಲಿಸಿ ಸಾಗರ ತಾಲೂಕಿನ ಕೊರಲಿಕೊಪ್ಪ ಗ್ರಾಮದ ಈಶ್ವರ ದೇವಸ್ಥಾನದ ಬಳಿ ದೂರುದಾರರ ಕಾರಿಗೆ ಡಿಕ್ಕಿ ಹೊಡೆಸಿ, ಜಖಂಗೊಳಿಸಿದ್ದಾರೆ ಎಂದು  ದೂರು ನೀಡಿದ್ದಾರೆ.

ಇದಲ್ಲದೆ ಮೈ ಕೈ ತಲೆ ಮೇಲೆ ಹೊಡೆದು, ಜಂಬಿಟ್ಟಿಗೆ ಕಲ್ಲನ್ನು ಅವರ ಮೇಲೆ ಎತ್ತಿ ಹಾಕಲು ಹೋದಾಗ ತಪ್ಪಿಸಿಕೊಂಡ ಪರಿಣಾಮ ಬಲ ಭುಜದ ಮೇಲೆ ಪೆಟ್ಟಾಗಿದೆ. ಜೊತೆಗೆ ಆರೋಪಿಗಳು ಅವರನ್ನು ಕಾರಿನೊಳಗೆ ಕೂರಿಸಿಕೊಂಡು ಮೈ ಕೈಗೆ ಹೊಡೆದು ಅವಾಚ್ಯ ಶಬ್ದಗಳಿಂದ ಬೈಯುತ್ತಾ ಪೊಲೀಸ್ ಗೆ ದೂರು ನೀಡಿದರೆ ಎಸ್ .ಸಿ/ಎಸ್.ಟಿ ಹುಡುಗರಿಂದ ಕೇಸ್ ಹಾಕಿಸುವುದಲ್ಲದೆ ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆಂದು ಶರತ್ ಕುಮಾರ್ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಶರತ್ ಕುಮಾರ್ ಅವರ ದೂರಿನ ಹಿನ್ನೆಲೆಯಲ್ಲಿ ದರ್ಶನ್, ಪ್ರವೀಣ್, ಶಿವರಾಮ, ದಿವಾಕರ್ ಹಾಗೂ ಹರೀಶ್  ಅವರನ್ನ ಆನಂದಪುರ ಪೊಲೀಸ್ ಠಾಣೆಯ  ಪಿಎಸ್ಐ ಪ್ರವೀಣ್ ಹಾಗೂ ಸಿಬ್ಬಂದಿ ಬಂಧನ ಮಾಡಿದ್ದಾರೆ.

 

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment