ಸಾಗರ : ಮುರುಘಾಮಠದಲ್ಲಿ ಮಹಾದ್ವಾರ ನಿರ್ಮಾಣಕ್ಕೆ ಭೂಮಿ ಪೂಜೆಯನ್ನುಸಂಸದ ಬಿ.ವೈ ರಾಘವೇಂದ್ರ ನೆರವೇರಿಸಿದರು.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮುರುಘಾಮಠದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಮುರುಘಾಮಠಕ್ಕೆ ಹೋಗುವ ರಸ್ತೆಯಲ್ಲಿ ಮಹಾದ್ವಾರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.
ಮಹಾದ್ವಾರ ನಿರ್ಮಾಣಕ್ಕೆ 10 ಲಕ್ಷ ನೀಡಿದ ಸಂಸದ
ಎಲ್ಲಾ ಪಕ್ಷಗಳ ಹಾಗೂ ಸಮಾಜ ಬಾಂಧವರ ನೇತೃತ್ವದಲ್ಲಿ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಮಹಾದ್ವಾರ ನಿರ್ಮಾಣಕ್ಕೆ 10 ಲಕ್ಷ ನೀಡುವುದಾಗಿ ಹೇಳಿದರು. ಸದ್ಭಕ್ತರು ಸಹ ಹೆಚ್ಚಿನ ಸಹಕಾರ ನೀಡಬೇಕು. ಮುಂದಿನ ವರ್ಷ ಈ ಮಹಾದ್ವಾರ ಲೋಕಾರ್ಪಣೆಗೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದರು.
ಮುರುಘಾಮಠ ಹಲವು ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ – ಮಾಜಿ ಸಚಿವ ಹರತಾಳು ಹಾಲಪ್ಪ
ಮುರುಘಾಮಠವು ಹಲವು ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.
ಶಿಕ್ಷಣ, ಆರೋಗ್ಯ, ಧಾರ್ಮಿಕ ಹಾಗೂ ದಾಸೋಹ ಕ್ಷೇತ್ರದಲ್ಲಿ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು.
ದೇಶದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ಅಭಿವೃದ್ಧಿ ಯಾವುದೇ ಒಂದು ಕ್ಷೇತ್ರಕ್ಕೆ ಸೀಮಿತವಾಗದೆ ಶಿಕ್ಷಣ, ಆರೋಗ್ಯ, ಧಾರ್ಮಿಕ ಜೊತೆಗೆ ಆರ್ಥಿಕ ಕ್ಷೇತ್ರದಲ್ಲೂ ಸಹ ಅಭಿವೃದ್ಧಿ ಕಾಣಬೇಕು. ಆರ್ಥಿಕ ಅಭಿವೃದ್ಧಿಯ ಪರಿಣಾಮವೇ ಹಲವು ಅಭಿವೃದ್ಧಿಗಾಗಿ ಕೆಲಸಗಳು ದೇಶದಲ್ಲಿ ನಿರಂತರವಾಗಿ ನಡೆಯುತ್ತಿದೆ.
ಸಾಗರದಲ್ಲಿ ಒಂದು ಬಾರಿ ಶಾಸಕನಾಗಿ ಕೊರೊನಾದ ನಡುವೆಯೂ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮುರುಘಾಮಠಕ್ಕೂ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಿದ್ದೇನೆ ಎಂದು ಹೇಳಿದರು.
ಮಹಾದ್ವಾರ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು 15 ಲಕ್ಷ
ಮುರುಘಾಮಠದಲ್ಲಿ ಮಹಾದ್ವಾರ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು 15 ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ.
ಮುರುಘಾಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಗುತ್ತಲ ಮಠದ ಪ್ರಭು ಸ್ವಾಮೀಜಿ, ಆಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಲೀಮುಲ್ಲಾ ಖಾನ್ ಪ್ರಮುಖರಾದ ಜ್ಞಾನೇಶ್ವರಪ್ಪ, ಎಂ.ಎಸ್ ಗೌಡ್ರು, ಕೆ .ಆರ್ ರಾಜು, ಉಮೇಶ್, ಮಲ್ಲಿಕಾರ್ಜುನ ಹಕ್ರೆ, ರತ್ನಾಕರ ಹೊನಗೋಡು ಇದ್ದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇