ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಪೊಲೀಸರ ಮಿಂಚಿನ ಕಾರ್ಯಾಚರಣೆ – ದೇವಸ್ಥಾನ ಕಾಣಿಕೆ ಹುಂಡಿಯ ಕಳ್ಳರ ಬಂಧನ Police lightning operation – temple gift box thieves arrested.

On: November 10, 2025 2:50 PM
Follow Us:
---Advertisement---

ಸಾಗರ : ಕಾರ್ಗಲ್ ಪೊಲೀಸರು ಹಾಗೂ ಆನಂದಪುರ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಗಂದೂರು ಶ್ರೀ ಕ್ಷೇತ್ರಪಾಲ ಬೂತರಾಯ ಕಟ್ಟೆಯ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಯನ್ನು ನವೆಂಬರ್ 7ರ ರಾತ್ರಿ ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿದ್ದರು. ಈ ವಿಷಯವಾಗಿ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಾಗರದ ವೃತ್ತ  ನಿರೀಕ್ಷಕರಾದ ಸಂತೋಷ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಪ್ರಕರಣವನ್ನು ಬೆನ್ನು ಹತ್ತಿದ ಕಾರ್ಗಲ್ ಪೊಲೀಸ್ ಠಾಣಾ ಪಿಎಸ್ಐ ನಾಗರಾಜ್ ಹೆಚ್ ಎನ್ ಹಾಗೂ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಕುಮಾರ್ ಅವರು ಘಟನೆ ನಡೆದ 24 ಗಂಟೆ ಒಳಗೆ ಆರೋಪಿಯನ್ನು ಬಂಧನ ಮಾಡಿ,  ಆರೋಪಿಯಿಂದ 10710 ರೂಂ ಹಾಗೂ ಕೃತ್ಯಕ್ಕೆ ಬಳಸಿದ ಹೀರೋ ಹೊಂಡಾ ಬೈಕನ್ನು ವಶಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನ್ಯಾಯಾಲಯವು ಆರೋಪಿಗೆ 18/11/20 25 ರವರೆಗೆ ನ್ಯಾಯಾಂಗ ಬಂಧನವನ್ನು ನೀಡಲಾಗಿದೆ.

ತನಿಖಾ ತಂಡದಲ್ಲಿ ಕಾರ್ಗಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜಯೇಂದ್ರ, ಅಣ್ಣಪ್ಪ ಕೆ.ಬಿ, ಮಂಜುನಾಥ್, ಪುರುಷೋತ್ತಮ್, ಹೇಮಂತ್ ಕುಮಾರ್ ಹಾಗೂ ಆನಂದಪುರ ಪೊಲೀಸ್ ಠಾಣೆಯ ಎ ಎಸ್ ಐ ಸಿದ್ದಾರೂಡ ಸಿಬ್ಬಂದಿಗಳಾದ ಉಮೇಶ್, ಲಮಾಣಿ, ಸತೀಶ್, ನಿರಂಜನ  ಪಾಲ್ಗೊಂಡಿದ್ದರು. ಈ ವಿಷಯವಾಗಿ ಆರೋಪಿ ಹಾಗೂ ಮಾಲು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment