ಸಾಗರ : ಭ್ರಷ್ಟಾಚಾರ ಹಾಗೂ ಉದ್ಯೋಗದಲ್ಲಿನ ತಾರತಮ್ಯದ ಹಿನ್ನೆಲೆಯಲ್ಲಿ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಕ್ಕೆ ಶೀಘ್ರದಲ್ಲೇ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಹೇಳಿದರು.
ಆನಂದಪುರದಲ್ಲಿ ಮಾತನಾಡಿದ ಅವರು, ಕೃಷಿ ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ವಿಶ್ವವಿದ್ಯಾಲಯದ ನಿರ್ಮಾಣಕ್ಕೆ ಸ್ಥಳೀಯವಾಗಿ 750ಕ್ಕೂ ಹೆಚ್ಚು ಎಕರೆ ಜಮೀನನ್ನು ನೀಡಲಾಗಿದೆ. ಆದರೆ ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದೆ ಹೊರ ಜಿಲ್ಲೆ ಹೊರ ರಾಜ್ಯದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಆರೋಪ ಮಾಡಿದರು.
ಇದಲ್ಲದೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ಕೂಲಿ ವೇತನ ನೀಡುತ್ತಿಲ್ಲ. ಈ ಹಣದಲ್ಲಿಯೂ ಸಹ ಮೋಸ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕುವ ಮೂಲಕ ಅಲ್ಲಿನ ಭ್ರಷ್ಟಾಚಾರವನ್ನು ಸರ್ಕಾರ ಹಾಗೂ ಸಾರ್ವಜನಿಕ ವಲಯಕ್ಕೆ ತಿಳಿಸಲಾಗುತ್ತದೆ ಎಂದು ಈ ಮೂಲಕ ತಿಳಿಸಿದ್ದಾರೆ.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ





