ಸಾಗರ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉತ್ತಮ ಆರೋಗ್ಯ ಸೇವ ನೀಡುವುದಾದರೆ ಒಳಿತು ಇಲ್ಲವೇ ಆಸ್ಪತ್ರೆಯನ್ನು ಬಂದು ಮಾಡುವುದು ಒಳ್ಳೆಯದು ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರತ್ನಾಕರ್ ಹೊನಗೋಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ತಾಲೂಕಿನ ಆನಂದಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡಿ ಮಾತನಾಡಿದರು.
ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬ ತಂದೆಯು ತನ್ನ ಮಗುವನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಾಗ , ವೈದ್ಯರು ಮಗುವನ್ನ ಪರಿಶೀಲನೆ ನಡೆಸದೆ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಕರೆಯ ಮೂಲಕವೇ ಔಷಧಗಳನ್ನು ನೀಡಲು ಹೇಳಿರುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾತಿ ಪ್ರಕಾರ 3 MBBS ಡಾಕ್ಟರ್ ಗಳು ಇದ್ದರೂ ಸಹ, ಕರ್ತವ್ಯಕ್ಕೆ ಮಾತ್ರ ಸರಿಯಾಗಿ ಹಾಜರಾಗುತ್ತಿಲ್ಲ. ಇದರಿಂದಾಗಿ ಆನಂದಪುರ ಹಾಗೂ ಸುತ್ತಮುತ್ತಲಿರುವ ಸಾವಿರಾರು ಬಡ ರೋಗಿಗಳಿಗೆ ತೊಂದರೆಯಾಗುತ್ತಿದೆ. 108 ವಾಹನ ಸಹ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ತುರ್ತು ಚಿಕಿತ್ಸೆ ಸಿಗದೇ ಹೋದರೆ ಈ ಆಸ್ಪತ್ರೆ ಅವಶ್ಯಕತೆ ಇದೆಯೇ ಎಂದು ಪ್ರಶ್ನೆ ಮಾಡಿದರು.
ಆನಂದಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುತ್ತವೆ. ಅಂತ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯ ಇರುವುದರಿಂದ ದಿನದ 24 ಗಂಟೆಯೂ ಸೇವೆ ಅವಶ್ಯಕತೆ ಇದೆ. ಇಲ್ಲಿನ ಆರೋಗ್ಯ ಕೇಂದ್ರಕ್ಕೆ ಇಲ್ಲಿಯವರೆಗೆ ಯಾವ ವೈದ್ಯಾಧಿಕಾರಿಗಳಾಗಲಿ ಇಲ್ಲಿನ ಪರಿಸ್ಥಿತಿಗಳನ್ನ ಅವಲೋಕನ ಸಹ ಮಾಡಿಲ್ಲ ಎಂದು ವ್ಯವಸ್ಥೆಯ ವಿರುದ್ಧ ಗುಡಿಗಿದರು.
ಇನ್ನೂ ಒಂದು ವಾರದೊಳಗೆ ಆಸ್ಪತ್ರೆಗೆ ಬೇಕಾದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ನೇಮಿಸದೆ ಇದ್ದರೆ, ಸಂಬಂಧಪಟ್ಟ ಅಧಿಕಾರಿಗಳು ಬರುವವರೆಗೂ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಉಗ್ರವಾದ ಹೋರಾಟವನ್ನು ಮಾಡಲಾಗುವುದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಧನರಾಜ್, ಹಿರಣ್ಯಪ್ಪ, ಗುರುರಾಜ್, ಮೋಹನ್ ಕುಮಾರ್, ಪ್ರದೀಪ್ ಕುಮಾರ್, ಪರಮೇಶ್, ಉಮೇಶ್, ಚಂದ್ರು , ರಾಜು ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ





