ಸಾಗರ : ಮಲೆನಾಡು ಭಾಗದ ಅಭಿವೃದ್ಧಿಗಾಗಿ ಸಾಗರದ ಶಾಸಕ ಗೋಪಾಲಕೃಷ್ಣ ಬೆೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶಿಕಾರಿಪುರದಿಂದ ಆನಂದಪುರ ಮಾರ್ಗವಾಗಿ ಹೊಸನಗರಕ್ಕೆ ಹೋಗುವಾಗ ಆನಂದಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭೇಟಿ ಮಾಡಿದ ಸಂದರ್ಭದಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡಿದ್ದಾರೆ.
ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಗುಣವುಳ್ಳ, ಹಿಂದುಳಿದ ವರ್ಗಗಳ ಏಳಿಗೆ ಹಾಗೂ ಶಿವಮೊಗ್ಗದ ಅಭಿವೃದ್ಧಿ ಆಗಬೇಕಾದರೆ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಲ್ಲಿ ತಮ್ಮ ಸಹಕಾರ ನೀಡಬೇಕು ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಆನಂದಪುರ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಜೇಂದ್ರ, ಆಚಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಖಲಿಮುಲ್ಲಾ ಖಾನ್, ಮುಖಂಡರಾದ ಉಮೇಶ್, ರಮಾನಂದ, ಲಿಂಗರಾಜ್, ರಹಮತ್ ವುಲ್ಲಾ, ವಿಜಯ್ ಕುಮಾರ್, ಸಿರಿಜಾನ್, ಅಮೀರ್ , ಮಂಜುನಾಥ್, ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ





