ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯದಿಂದ 11 ಗೇಟ್ ತೆರೆದು 15 ಸಾವಿರ ಕ್ಯೂಸೆಕ್ ನೀರು ಹೊರಗೆ ಬಿಡಲಾಗಿದೆ.
ಲಿಂಗನಮಕ್ಕಿ ಜಲಾಶಯ ಬಹುತೇಕ ಪೂರ್ಣವಾಗಿದೆ. 48.393 ಕ್ಯೂಸೆಕ್ ನೀರು ಒಳಹರಿವಿದ್ದು ,142.33 ಟಿ.ಎಂ.ಸಿ ನೀರು ಸಂಗ್ರವಾಗಿತ್ತು. ಇಂದು ಬಹುತೇಕ ಸಂಪೂರ್ಣ ಭರ್ತಿಯಾಗಿದ್ದರಿಂದ 11 ಗೇಟ್ ಗಳನ್ನು ತೆಗೆದು ನೀರು ಹೊರಕ್ಕೆ ಬಿಡಲಾಗಿದೆ.
ಸಾಗರ ತಾಲ್ಲೂಕಿನ ಹೊಸನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಶರಾವತಿ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.
ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಜಲಾಶಯದ ಕೆಳಭಾಗದ ನದಿ ಪಾತ್ರದ ಜನರಿಗೆ ಅಲರ್ಟ್ ನೀಡಲಾಗಿದೆ.